

ಚಿಕ್ಕಮಗಳೂರು: ರಾಜ್ಯಪಾಲರ ವಿರುದ್ಧ ಬಾಂಗ್ಲಾದೇಶದಲ್ಲಿ ಆದ ಹಿಂಸಾಚಾರದ ಸ್ವರೂಪದಲ್ಲಿ ದಾಳಿ ಮಾಡುವುದಾಗಿ ರಾಷ್ಟçವಿರೋಧಿ ಹೇಳಿಕೆ ನೀಡಿರುವ ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜಾ ಅವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ಮಂಗಳವಾರ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಎಎಸ್‌ಪಿ ಕೃಷ್ಣಮೂರ್ತಿ ಅವರಿಗೆ ಮನವಿ ಸಲ್ಲಿಸಿದರು.
ಮೂಡಾ ಹಗರಣಕ್ಕೆ ಸಂಬAಧಿಸಿದAತೆ ಸಿಎಂ ವಿರುದ್ಧ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿರುವುದನ್ನು ವಿರೋಧಿಸಿ ಕಾಂಗ್ರೆಸ್‌ನಿAದ ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಐವಾನ್ ಡಿಸೋಜಾ ಅವರು ರಾಷ್ಟçದ್ರೋಹಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿದರು.
ಕೂಡಲೇ ರಾಜ್ಯಪಾಲರು ಹಿಂದಕ್ಕೆ ಹೋಗಬೇಕು. ಇಲ್ಲದಿದ್ದಲ್ಲಿ ಬಾಂಗ್ಲ ದೇಶದಲ್ಲಿ ಯಾವ ರೀತಿ ಆಗಿದೆಯೋ ಅದೇ ರೀತಿ ರಾಜ್ಯಪಾಲರ ಕಚೇರಿ ಹಾಗೂ ಮನೆಗೆ ನುಗ್ಗುವ ಕೆಲಸವನ್ನು ಕಾಂಗ್ರೆಸ್ ಕಾರ್ಯಕರ್ತರು ಮಾಡಬೇಕಾಗುತ್ತದೆ. ಹಾಗಾಗಿ ಮಾನ ಮರ್ಯಾದೆ ಇದ್ದರೆ ಕೇಂದ್ರ ಸರ್ಕಾರ ಕೂಡಲೇ ರಾಜ್ಯಪಾಲರನ್ನು ಹಿಂದಕ್ಕೆ ಕರೆಯಿಸಿಕೊಳ್ಳಬೇಕು ಎಂದು ರಾಷ್ಟç ವಿರೋಧಿ ಹಾಗೂ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡಿಸುವ ಹೇಳಿಕೆ ನೀಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಷ್ಟç ವಿರೋಧಿ ಹಾಗೂ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡಿಸುವ ದುರುz್ದೆÃಶದಿಂದ ತಮ್ಮ ಕಾರ್ಯಕರ್ತರಿಗೆ ಪ್ರಚೋದನೆ ನೀಡುವ ಹೇಳಿಕೆಗಳನ್ನು ನೀಡಿರುವ ವಿಧಾನ ಪರಿಷತ್ ಸದಸ್ಯರು ಹಾಗೂ ಕಾಂಗ್ರೆಸ್ ನಾಯಕ ಐವಾನ್ ಡಿಸೋಜಾ ವಿರುದ್ಧ ಸೂಕ್ತ ಪ್ರಕರಣ ದಾಖಲಿಸಿ, ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಮನವಿ ಸಲ್ಲಿಸುವ ಸಂದರ್ಭದಲ್ಲಿ ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ಸಂತೋಷ್ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿ ಸಚ್ಚಿನ್ ಗೌಡ, ಉಪಾಧ್ಯಕ್ಷೆ ಅಂಕಿತಾ, ನಗರ ಯುವ ಮೋರ್ಚಾ ಅಧ್ಯಕ್ಷ ಜೀವನ್ ಕೋಟೆ, ನಗರ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಗೌತಮ್, ಪುನೀತ್ ಮತ್ತಿತರರಿದ್ದರು.