ಅಂಗನವಾಡಿಗಳನ್ನು ಬಲಿಷ್ಠಗೊಳಿಸಲು ಕ್ರಮ

29 SND 03
ಸಿಂಧನೂರು ರಂಗಮಂದಿರದಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಮೊಬೈಲ್ ವಿತರಣೆ ಕಾರ್ಯಕ್ರಮ ನಡೆಯಿತು. ಶಾಸಕ ಹಂಪನಗೌಡ ಬಾದರ್ಲಿ, ತಹಸೀಲ್ದಾರ್ ಅರುಣ್ ದೇಸಾಯಿ, ಸಿಡಿಪಿಒಗಳಾದ ಲಿಂಗನಗೌಡ, ಅಶೋಕ ಕುಮಾರ, ಸ್ತ್ರೀಶಕ್ತಿ ಒಕ್ಕೂಟದ ತಾಲೂಕು ಅಧ್ಯಕ್ಷೆ ಶ್ರೀ ದೇವಿ ಶ್ರೀನಿವಾಸ, ತಾಪಂ ಇಒ ಚಂದ್ರಶೇಖರ ಇತರರಿದ್ದರು.
Published on

ಸಿಂಧನೂರು: ಮಹಿಳಾ ಸಬಲೀಕರಣಕ್ಕೆ ಸರ್ಕಾರ ಹೆಚ್ಚಿನ ಆದ್ಯತೆ ನೀಡಿದ್ದು, ಗ್ಯಾರಂಟಿ ಯೋಜನೆ ಅನುಷ್ಠಾನದಲ್ಲಿಯೂ ಮಹಿಳೆಯರಿಗೆ ಪ್ರಾಶಸ್ತ್ಯ ನೀಡಲಾಗಿದೆ ಎಂದು ಶಾಸಕ ಹಂಪನಗೌಡ ಬಾದರ್ಲಿ ಹೇಳಿದರು.

ನಗರದ ರಂಗಮಂದಿರದಲ್ಲಿ ಶನಿವಾರ ಜಿಲ್ಲಾಡಳಿತ, ತಾಲೂಕು ಆಡಳಿತ, ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಹಾಗೂ ತಾಲೂಕು ಇಂದಿರಾಗಾಂಧಿ ಸ್ತ್ರೀಶಕ್ತಿ ಒಕ್ಕೂಟ ಆಶ್ರಯದಲ್ಲಿ ಆಯೋಜಿಸಿದ್ದ ಅಂಗನವಾಡಿ ಕಾರ್ಯಕರ್ತೆಯರಿಗೆ ಮೊಬೈಲ್ ಹಾಗೂ ಸಮವಸ್ತ್ರ ವಿತರಿಸಿ ಮಾತನಾಡಿದರು.

ಅಂಗನವಾಡಿ ಕೇಂದ್ರಗಳನ್ನು ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ಸರ್ಕಾರ ಕ್ರಮಕೈಗೊಂಡಿದೆ. ಅಂಗನವಾಡಿಗಳಲ್ಲಿ ಪೌಷ್ಟಿಕ ಆಹಾರ ನೀಡಲು ಬದ್ಧವಾಗಿದೆ. ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಸಿಡಿಪಿಒ ಲಿಂಗನಗೌಡ ಮಾತನಾಡಿ, ಪೋಷಣ ಅಭಿಯಾನದಡಿ ಅಂಗನವಾಡಿ ಕಾರ್ಯಕರ್ತೆಯರಿಗೆ ಸಿಂಧನೂರು ವಿಭಾಗದಲ್ಲಿ 370 ಹಾಗೂ ತುರ್ವಿಹಾಳ 70 ಕೇಂದ್ರಗಳ ಕಾರ್ಯಕರ್ತೆಯರಿಗೆ ಮೊಬೈಲ್ ವಿತರಿಸಲಾಗಿದ್ದು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net