ಸಹಕಾರ ಭಾರತಿ ಅಭ್ಯರ್ಥಿಗಳ ಗೆಲುವಿಗೆ ಸಕ್ರಿಯ ಪ್ರಚಾರ

milk
ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಚುನಾವಣೆ ಪೂರ್ವಭಾವಿ ಸಭೆ ಕುಂದಾಪುರ ಬಿಜೆಪಿ ಕಾರ್ಯಾಲಯದಲ್ಲಿ ನಡೆಯಿತು.
Published on

ವಿಜಯವಾಣಿ ಸುದ್ದಿಜಾಲ ಕುಂದಾಪುರ

ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಚುನಾವಣೆ ಏ.26ರಂದು ನಡೆಯಲಿದ್ದು, ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳಾಗಿ ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳ ಪರ ಕಾರ್ಯಕರ್ತರು ಹಾಗೂ ಮುಖಂಡರು ಸಕ್ರಿಯವಾಗಿ ಪ್ರಚಾರ ಕೈಗೊಳ್ಳಬೇಕು ಎಂದು ಶಾಸಕ ಕಿರಣ್‌ಕುಮಾರ್ ಕೊಡ್ಗಿ ಕರೆ ನೀಡಿದರು. ಕುಂದಾಪುರ ಬಿಜೆಪಿ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಎಲ್ಲ ಅಭ್ಯರ್ಥಿಗಳ ಜತೆ ಸಂವಹನ ನಡೆಸಿ, ಸಹಕಾರ ಭಾರತಿ ಪರವಾಗಿ ಉಡುಪಿ ಜಿಲ್ಲೆಯಲ್ಲಿ ಉತ್ಸಾಹಿ ಹಾಗೂ ಹೊಸ ಹೈನುಗಾರರನ್ನೇ ಅಭ್ಯರ್ಥಿಗಳನ್ನಾಗಿಸಲಾಗಿದೆ. ಹೈನುಗಾರರ ಏಳಿಗೆ, ಹೈನುಗಾರಿಕೆ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಹೇಳಿದರು.

ಕುಂದಾಪುರ ಬಿಜೆಪಿ ಕ್ಷೇತ್ರಾಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ ಮಾತನಾಡಿದರು. ಬಿಜೆಪಿ ನಿಕಟ ಪೂರ್ವ ಅಧ್ಯಕ್ಷ ಶಂಕರ್ ಅಂಕದಕಟ್ಟೆ, ಅಭ್ಯರ್ಥಿಗಳಾದ ಕಾಡೂರು ಸುರೇಶ್ ಶೆಟ್ಟಿ, ಸುಬ್ಬಣ್ಣ ಶೆಟ್ಟಿ, ಪ್ರಾಣೇಶ್ ಯಡಿಯಾಳ, ಕುಂದಾಪುರ ಬಿಜೆಪಿ ಮಂಡಲದ ಪದಾಧಿಕಾರಿಗಳು, ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

ಸುಧೀರ್ ಕೆ.ಎಸ್. ವಂದಿಸಿದರು. ಮಂಡಲ ಪ್ರಧಾನ ಕಾರ್ಯದರ್ಶಿ ಸತೀಶ್ ಪೂಜಾರಿ ವಕ್ವಾಡಿ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net