ಕ್ರಿಯಾಶೀಲ ಹವ್ಯಾಸ ರೂಢಿಸಿಕೊಳ್ಳಲಿ

10 khp 01
ಕಾನಹೊಸಹಳ್ಳಿ ಸಮೀಪದ ಗುಡೇಕೋಟೆಯಲ್ಲಿ ಆಯೋಜಿಸಿದ್ದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು ಪಿಎಸೈ ಸುಬ್ರಮಣ್ಯಂ ಉದ್ಘಾಟಿಸಿದರು. ಪ್ರಾಚಾರ್ಯ ಗಿರೀಶ, ಮಹಾಲಿಂಗಯ್ಯ, ಉಮೇಶ ಜವಳಿ, ದುರುಗೇಶ, ಎಂ.ರಾಜಣ್ಣ, ಫರ್ವಿನ್ ಬೇಗಂ ಇತರರಿದ್ದರು.
Published on

ಕಾನಹೊಸಹಳ್ಳಿ: ಮದ್ಯವ್ಯಸನ, ಗುಟ್ಕಾ, ಧೂಮಪಾನಗಳಿಂದ ಯುವ ಜನತೆಯ ಜೀವನ ಹಾಳಾಗುತ್ತಿದೆ. ದುಶ್ಚಟಗಳು ದೈಹಿಕ ಸದೃಢತೆ ಹಾಗೂ ಮಾನಸಿಕ ಆರೋಗ್ಯದ ಮೇಲೆ ದುಷ್ಪರಿಣಾ ಬೀರುತ್ತವೆ. ದುಶ್ಚಟ ಒಮ್ಮೆ ಆರಂಭವಾದರೆ ಬದುಕು ವಿನಾಶದ ಹಾದಿಯಲ್ಲಿ ಸಾಗುತ್ತದೆ. ವಿದ್ಯಾರ್ಥಿ ಜೀವನದಲ್ಲಿ ಉತ್ತಮ ಕ್ರಿಯಾಶೀಲ ಹವ್ಯಾಸಗಳನ್ನು ರೂಢಿಸಿಕೊಳ್ಳಬೇಕು ಎಂದು ಪ್ರಾಚಾರ್ಯ ಎಂ.ಟಿ.ಗಿರೀಶ ಹೇಳಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಸಹಯೋಗದಲ್ಲಿ ಗುಡೇಕೋಟೆ ಕರ್ನಾಟಕ ಪಬ್ಲಿಕ್ ಶಾಲೆಯ ಪದವಿ ಪೂರ್ವ ಕಾಲೇಜಿನಲ್ಲಿ ಶನಿವಾರ ಆಯೋಜಿಸಿದ್ದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದಲ್ಲಿ ಮಾತನಾಡಿದರು.

ಶೈಕ್ಷಣಿಕ ವ್ಯವಸ್ಥೆಯಲ್ಲಿ ಉತ್ತಮ ಶಿಕ್ಷಣ ಪಡೆದು ಬದುಕು ಕಟ್ಟಿಕೊಳ್ಳವ ಪ್ರಯತ್ನದ ದಿಶೆಯಲ್ಲಿ ಸಾಗಬೇಕೆ ಹೊರತು ದುಶ್ಚಟಗಳಿಗೆ ಬಲಿಯಾಗಬಾರದು ಹೆತ್ತವರ ಆಶಯದಂತೆ ನಡೆದುಕೊಳ್ಳಬೇಕು ಎಂದರು.

ಪಿಎಸ್‌ಐ ಸುಬ್ರಮಣ್ಯಂ ಜಿ.ಮಾತನಾಡಿ, ಆರೋಗ್ಯ ಉತ್ತಮವಾಗಿದ್ದರೆ ಏನನ್ನಾದರೂ ಸಾಧಿಸಬಹುದು. ಹಾಗಾಗಿ ಯಾರೂ ದುಶ್ವಟಗಳಿಗೆ ಬಲಿಯಾಗಬಾರದು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ದುಶ್ಚಟ ಮುಕ್ತಸಮಾಜದ ನಿರ್ಮಾಣ ನಮ್ಮೆಲ್ಲರ ಹೊಣೆ ಎಂಬ ಧ್ಯೇಯದೊಂದಿಗೆ ವಿದ್ಯಾರ್ಥಿಗಳಲ್ಲಿ ಮಾದಕ ವಸ್ತುಗಳ ಕುರಿತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದ ಮೂಲಕ ಜಾಗೃತಿ ಮೂಡಿಸುವ ಕಾರ್ಯ ಮಾಡುತ್ತಿರುವುದು ಉತ್ತಮ ಬೆಳವಣಿಗೆ ಎಂದರು.

ಯೋಜನೆಯ ಕೃಷಿ ಮೇಲ್ವಿಚಾರಕ ಮಹಾಲಿಂಗಯ್ಯ ಉಮೇಶ ಜವಳಿ, ಕರಿಯಪ್ಪ, ಸೇವಾ ಪ್ರತಿನಿಧಿ ದುರುಗೇಶ, ಉಪನ್ಯಾಸಕರಾದ ಫರ್ವಿನ್ ಬೇಗಂ, ಎಂ.ರಾಜಣ್ಣ, ಚಿದಾನಂದಪ್ಪ, ರಾಣೋಜೀನಾಯ್ಕ, ಚೇತನ್ ಕುಮಾರ, ಬಸವರಾಜ, ರಾಜೇಶ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net