ಶಿಕ್ಷಣದ ಜತೆಗೆ ಕ್ರೀಡೆಯಲ್ಲಿ ಸಕ್ರಿಯವಾಗಿ ಭಾಗವಹಿಸಿ

30-09-Shiva-4
ರಾಯಚೂರಿನ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟವನ್ನು ಅಪರ ಜಿಲ್ಲಾಕಾರಿ ಡಾ.ಕೆ.ಆರ್.ದುರಗೇಶ ಉದ್ಘಾಟಿಸಿದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಈರೇಶ ನಾಯಕ, ದೈಹಿಕ ಶಿಕ್ಷಣಾಕಾರಿ ವೆಂಕಣ್ಣ, ಶಾಲಾ ಶಿಕ್ಷಣ ಇಲಾಖೆ ಅಕಾರಿ ಪ್ರಕಾಶ ಇದ್ದರು.
Published on

ರಾಯಚೂರು: ಯುವ ಜನರು ಶಿಕ್ಷಣದ ಜತೆ ಜತೆಯಲ್ಲಿ ಕ್ರೀಡೆಯಲ್ಲಿಯೂ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ಆರೋಗ್ಯವನ್ನು ಸದೃಢವಾಗಿಟ್ಟುಕೊಳ್ಳಬೇಕು ಎಂದು ಅಪರ ಜಿಲ್ಲಾಕಾರಿ ಡಾ.ಕೆ.ಆರ್.ದುರಗೇಶ ಹೇಳಿದರು.
ಸ್ಥಳೀಯ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಶನಿವಾರ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿ, ಕ್ರೀಡೆಗಳಲ್ಲಿ ಸ್ಪರ್ಧಾ ಮನೋಭಾವದಿಂದ ಪಾಲ್ಗೊಳ್ಳಬೇಕು ಎಂದರು.
ಕ್ರೀಡೆಯಲ್ಲಿ ಪಾಲ್ಗೊಳ್ಳುವುದರಿಂದ ದೈಹಿಕವಾಗಿ ಹಾಗೂ ಮಾನಸಿಕವಾಗಿ ಸದೃಢರಾಗಬಹುದಾಗಿದ್ದು, ಇದರಿಂದ ಓದಿನಲ್ಲಿ ಏಕಾಗ್ರತೆ ಬೆಳೆಯಲು ಸಾಧ್ಯವಾಗಲಿದೆ. ಕ್ರೀಡೆಯಲ್ಲಿ ಶಿಸ್ತು ಕಾಪಾಡಿಕೊಳ್ಳಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಈರೇಶ ನಾಯಕ, ದೈಹಿಕ ಶಿಕ್ಷಣಾಕಾರಿ ವೆಂಕಣ್ಣ, ಶಾಲಾ ಶಿಕ್ಷಣ ಇಲಾಖೆ ಅಕಾರಿ ಪ್ರಕಾಶ ಹಾಗೂ ಕ್ರೀಡಾಪಟುಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net