ಕಾರ್ಯಕರ್ತರು ಒಗ್ಗಟ್ಟಾಗಿ ಚುನಾವಣೆ ಎದುರಿಸಿ

Koravi New
Published on

ಹುಬ್ಬಳ್ಳಿ : ಧಾರವಾಡ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ ಪ್ರಚಾರ ಜೋರಾಗಿ ನಡೆದಿದೆ. ಜನರ ಸ್ಪಂದನೆ ಉತ್ತಮವಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರದಿಂದ ಆಗಿರುವ ಕೆಲಸಗಳನ್ನು ಬಿಜೆಪಿ ಕಾರ್ಯಕರ್ತರು ಮತದಾರರಿಗೆ ತಿಳಿಯಪಡಿಸುತ್ತಿದ್ದಾರೆ. ಮತದಾರರು ಪ್ರಲ್ಹಾದ ಜೋಶಿಯವರಿಗೆ ಮತ ನೀಡಲು ಹಾಗೂ ಮತ್ತೊಮ್ಮೆ ಮೋದಿ ಗೆಲ್ಲಿಸಲು ತುದಿಗಾಲಿನ ಮೇಲೆ ನಿಂತಿದ್ದಾರೆ ಎಂದು ಮಹಾನಗರ ಪಾಲಿಕೆ ಸದಸ್ಯ ರಾಜಣ್ಣ ಕೊರವಿ ಹೇಳಿದರು.

ಧಾರವಾಡ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ ಜೋಶಿ ಪರ ಇಲ್ಲಿನ ವಾರ್ಡ್ ನಂ. 36ರಲ್ಲಿ ಭಾನುವಾರ ಆಯೋಜಿಸಿದ್ದ ಪ್ರಚಾರ ಸಭೆಯಲ್ಲಿ ಮಾತನಾಡಿದರು.

ಪಕ್ಷದ ಕಾರ್ಯಕರ್ತರು ಒಗ್ಗಟ್ಟಾಗಿ ಕಾರ್ಯನಿರ್ವಹಿಸಬೇಕು, ಚುನಾವಣಾ ಕೆಲಸವನ್ನು ಜವಾಬ್ದಾರಿಯುತವಾಗಿ ನಿರ್ವಹಿಸಬೇಕು ಎಂದು ತಿಳಿಸಿದರು.

ಅತಿಥಿಯಾಗಿದ್ದ ಆರ್​ಎಸ್​ಎಸ್ ಪ್ರಮುಖ ಸುಧಾಕರ್ ಶೆಟ್ಟಿ ಮಾತನಾಡಿ, ನರೇಂದ್ರ ಮೋದಿ ಅವರ ನಾಯಕತ್ವ ದೇಶಕ್ಕೆ ತುಂಬ ಅವಶ್ಯಕತೆ ಇದೆ. ಈ ಚುನಾವಣೆಯಲ್ಲಿ ಬಿಜೆಪಿಯ ಪ್ರಲ್ಹಾದ ಜೋಶಿ ಅವರನ್ನು ಗೆಲ್ಲಿಸಬೇಕು ಎಂದು ಹೇಳಿದರು.

ವಾರ್ಡ್ ಅಧ್ಯಕ್ಷ ಬಸವರಾಜ ಮಾಡಳ್ಳಿ, ಶಕ್ತಿಕೇಂದ್ರ ಪ್ರಮುಖರಾದ ಹನುಮಂತಪ್ಪ ಎಲಿವಾಳ ಹಾಗೂ ಇತರರು ಸದಸ್ಯರುಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net