ಕಾಂಗ್ರೆಸ್ ಬೆಂಬಲಿತರ ಗೆಲುವಿಗೆ ಶ್ರಮಿಸಿ

2ajp1
Published on

ಅಜ್ಜಂಪುರ: ಗ್ರಾಪಂ ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳನ್ನು ಗೆಲ್ಲಿಸಲು ಮುಖಂಡರು ಮತ್ತು ಕಾರ್ಯಕರ್ತರು ಶ್ರಮಿಸಬೇಕು ಎಂದು ಪಕ್ಷದ ಜಿಲ್ಲಾಧ್ಯಕ್ಷ ಡಾ. ಅಂಶುಮಂತ್ ತಿಳಿಸಿದರು.

ಬುಧವಾರ ಆಯೋಜಿಸಿದ್ದ ಬೂತ್ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಜಿಪಂ ಕಚೇರಿಯನ್ನು ಬಿಜೆಪಿ ರಾಜಕೀಯಕ್ಕೆ ಬಳಸಿಕೊಂಡಿದೆ. ಆ ಪಕ್ಷಕ್ಕೆ ರಾಜಕಾರಣ ಮುಖ್ಯವೇ ಹೊರತು ಅಭಿವೃದ್ಧಿ, ಜನರ ಸಂಕಷ್ಟಕ್ಕೆ ಸ್ಪಂದಿಸುವುದಲ್ಲ ಎಂದು ಟೀಕಿಸಿದರು.

ಮಾಜಿ ಶಾಸಕ ಎಸ್.ಎಂ.ನಾಗರಾಜ್ ಮಾತನಾಡಿ, ಕರೊನಾ ತೀವ್ರವಾಗಿದ್ದ ಸಂದರ್ಭ ಉದ್ಯೋಗ ಖಾತ್ರಿ ಯೋಜನೆಗೆ ಸರ್ಕಾರ ಅನುದಾನ ಬಿಡುಗಡೆಗೊಳಿಸದೆ ಕೂಲಿ ಕಾರ್ವಿುಕರನ್ನು ಸಂಕಷ್ಟಕ್ಕೆ ತಳ್ಳಿತು. ಅವರ ಶಾಪ ಬಿಜೆಪಿ ಸರ್ಕಾರಕ್ಕೆ ತಟ್ಟಲಿದೆ ಎಂದರು.

ಮಾಜಿ ಶಾಸಕ ಜಿ.ಎಚ್.ಶ್ರೀನಿವಾಸ್ ಮಾತನಾಡಿ, ಬಿಜೆಪಿ ಸರ್ಕಾರ ಜನ, ರೈತ, ಕಾರ್ವಿುಕ ವಿರೋಧಿ ಕಾಯ್ದೆಗಳನ್ನು ಜಾರಿಗೊಳಿಸಿದೆ. ಇದರ ವಿರುದ್ಧ ಪ್ರತಿಭಟನೆ ನಡೆಸುತ್ತಿರುವವರ ಮನವಿ ಸ್ವೀಕರಿಸುವ, ಸಮಸ್ಯೆಗೆ ಸ್ಪಂದಿಸುವ ಮನೋಭಾವ ಕೇಂದ್ರಕ್ಕಿಲ್ಲ. ಇದಕ್ಕೆ ಮತದಾರ ತಕ್ಕ ಉತ್ತರ ನೀಡಲಿದ್ದಾರೆ ಎಂದು ಹೇಳಿದರು.

ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಾನಂದಸ್ವಾಮಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎ.ಸಿ.ಚಂದ್ರಪ್ಪ, ಎಪಿಎಂಸಿ ಮಾಜಿ ಅಧ್ಯಕ್ಷ ಎಂ.ಕೃಷ್ಣಮೂರ್ತಿ, ಮುಖಂಡ ಜಿ.ನಟರಾಜ್, ಅಂಕುಶ್​ಕುಮಾರ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net