

ಬೈಲಹೊಂಗಲ: ಎಲ್ಲ ಕಾರ್ಯಕರ್ತರ ಅವಿರತ ಪರಿಶ್ರಮದಿಂದಾಗಿ ಪಕ್ಷಕ್ಕೆ ಇಂದು ಸಾಕಷ್ಟು ಬಲ ಬಂದಿದೆ ಎಂದು ರಾಜ್ಯ ಬಿಜೆಪಿ ಸಂಘಟನಾ ಕಾರ್ಯದರ್ಶಿ ಅರುಣಕುಮಾರ ಜಿ. ಹೇಳಿದರು.
ಬೆಳಗಾವಿ ಲೋಕಸಭಾ ಉಪಚುನಾವಣೆ ಪ್ರಚಾರಾರ್ಥವಾಗಿ ಪಟ್ಟಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬಿಜೆಪಿ ಬೂತ್ ಮಟ್ಟದ ಅಧ್ಯಕ್ಷರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ ಅಭ್ಯರ್ಥಿ ಮಂಗಲ ಸುರೇಶ ಅಂಗಡಿ ಅವರು ಅತ್ಯಧಿಕ ಮತಗಳ ಅಂತರದಿಂದ ಜಯ ಸಾಧಿಸಬೇಕಾದರೆ ಬೂತ್ ಮಟ್ಟದಲ್ಲಿ ಪಕ್ಷದ ಸಂಘಟನೆ ಇನ್ನೂ ಉತ್ತಮವಾಗಿ ಆಗಬೇಕು ಎಂದು ಹೇಳಿದರು.
ಶಾಸಕ ಮಹಾಂತೇಶ ದೊಡಗೌಡರ, ಮಾಜಿ ಶಾಸಕ ಜಗದೀಶ ಮೆಟಗುಡ್ಡ ಮಾತನಾಡಿ, ಕೇಂದ್ರ, ರಾಜ್ಯ ಸರ್ಕಾರದ ಜನಪರ ಯೋಜನೆಗಳನ್ನು ಮನೆ, ಮನೆಗೆ ತೆರಳಿ ಮುಟ್ಟಿಸುವ ಕೆಲಸವಾಗಬೇಕು. ಕರೊನಾ ನಿಯಂತ್ರಣಕ್ಕೆ ವಿಶ್ವವೇ ಭಾರತದ ಲಸಿಕೆಗೆ ಬೇಡಿಕೆ ಇಟ್ಟಿದ್ದು ಹೆಮ್ಮೆಯ ವಿಷಯವಾಗಿದೆ ಎಂದರು.
ಮಂಡಲ ಅಧ್ಯಕ್ಷ ಮಡಿವಾಳಪ್ಪ ಚಳಕೊಪ್ಪ, ವಿಭಾಗ ಸಹ-ಪ್ರಭಾರಿಗಳಾದ ಬಸವರಾಜ ಯಾಕಂಚಿ, ವಿಜಯ ಮೆಟಗುಡ್ಡ, ವಿಭಾಗ ಸಂಘಟನಾ ಕಾರ್ಯದರ್ಶಿ ಪ್ರಕಾಶ ಅಕ್ಕಲಕೋಟ, ಸಂದೀಪ ದೇಶಪಾಂಡೆ, ಪ್ರಧಾನ ಕಾರ್ಯದರ್ಶಿ ಲಕ್ಕಪ್ಪ ಕಾರ್ಗಿ, ದಯಾನಂದ ಪರಾಳಶೆಟ್ಟರ, ಆನಂದ ಮೂಗಿ, ಸಿ.ಜಿ. ವಿಭೂತಿಮಠ, ಲೋಕೇಶ ಹಡಪದ, ಮಲ್ಲಿಕಾರ್ಜುನ ದೇಸಾಯಿ, ಸಂತೋಷ ಹಡಪದ ಇತರರು ಇದ್ದರು.