ಚಿತ್ರನಟ ಚೇತನ್ ಹೇಳಿಕೆಗೆ ಖಂಡನೆ; ಮಡಿಕೇರಿಯಲ್ಲಿ ದೂರು ದಾಖಲಿಸಿದ ಯುವ ಸೇನೆ

MDK02
Published on

ಮಡಿಕೇರಿ: ದೈವಾರಾಧನೆ ಹಿಂದೂ ಸಂಪ್ರದಾಯವಲ್ಲವೆಂದು ಹೇಳಿಕೆ ನೀಡುವ ಮೂಲಕ ನಟ ಚೇತನ್ ಲಕ್ಷಾಂತರ ಭಕ್ತರ ಮನಸ್ಸಿಗೆ ನೋವುಂಟು ಮಾಡಿದ್ದಾರೆ ಮತ್ತು ಸಮಾಜದಲ್ಲಿ ಗೊಂದಲ ಸೃಷ್ಟಿಸಿ ಶಾಂತಿ ಕದಡುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಆರೋಪಿಸಿ ಕೊಡಗು ಯುವಸೇನೆ ಮಡಿಕೇರಿಯಲ್ಲಿ ಶುಕ್ರವಾರ ದೂರು ದಾಖಲಿಸಿದೆ.


ಯುವಸೇನೆಯ ಜಿಲ್ಲಾ ಉಪಾಧ್ಯಕ್ಷ ನಡುಮುಟ್ಲು ಪ್ರವೀಣ್‌ರವರು ಡಿವೈಎಸ್‌ಪಿ ಗಜೇಂದ್ರ ಪ್ರಸಾದ್‌ರವರಿಗೆ ದೂರು ಸಲ್ಲಿಸಿ ಚೇತನ್ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.


ನಿರ್ದೇಶಕ ರಿಷಬ್ ಶೆಟ್ಟಿ ನಿರ್ದೇಶನದ ದೈವಾರಾಧನೆಯ ಕಥೆಯಾಧಾರಿತ ಕಾಂತಾರ ಚಿತ್ರ ಹಾದಿ ತಪ್ಪುತ್ತಿರುವ ಯುವ ಜನಾಂಗಕ್ಕೆ ಮಾರ್ಗದರ್ಶನ ಮಾಡುವಲ್ಲಿ ಯಶಸ್ವಿಯಾಗಿದೆ ಮತ್ತು ದೈವಶಕ್ತಿಯನ್ನು ಪ್ರತಿಬಿಂಬಿಸಿದೆ. ಚಿತ್ರ ಲಕ್ಷಾಂತರ ಭಕ್ತರ ಮನಸೂರೆಗೊಳ್ಳುತ್ತಿರುವ ಹೊತ್ತಿನಲ್ಲೇ ನಟ ಚೇತನ್ ದೈವಾರಾಧನೆಯ ಕುರಿತು ಇಲ್ಲಸಲ್ಲದ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಪ್ರವೀಣ್ ಅಸಮಾಧಾನ ವ್ಯಕ್ತಪಡಿಸಿದರು.


ಈ ಸಂದರ್ಭದಲ್ಲಿ ಯವಸೇನೆಯ ಮುಖಂಡ ಕುಲ್ದೀಪ್, ಪೂಣಚ್ಚ ಕೂಡ ಚೇತನ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net