ದರ್ಶನ್ ತೇಜೋವಧೆ ಪ್ರಯತ್ನ ನಡೆಯುತ್ತಿವೆ: ಸಚಿವ ಬಿ.ಸಿ. ಪಾಟೀಲ್

Darshan
Published on

ಬೆಂಗಳೂರು: ನಟ ದರ್ಶನ್, ಇಂದ್ರಜಿತ್ ನಡುವೆ ಕಿತ್ತಾಟ ವಿಚಾರದಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲ್ ದರ್ಶನ್ ಅವರನ್ನು ಸಮರ್ಥಿಸಿಕೊಂಡಿದ್ದಾರೆ.

ನಟ ದರ್ಶನ್ ಒಳ್ಳೆಯ ವ್ಯಕ್ತಿ. ಬಹಳ ಕಷ್ಟದಿಂದ ಬೆಳೆದು ಈ ಮಟ್ಟಕ್ಕೆ ಬಂದಿದ್ದಾರೆ. ಅವರ ತೇಜೋವಧೆ ಮಾಡಲು ಪ್ರಯತ್ನ ನಡೆದಿದೆ ಎಂದು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಸಿದರು.

ದರ್ಶನ್​ ಹೊಸಬರನ್ನು ಚಿತ್ರರಂಗದಲ್ಲಿ ಪ್ರೋತ್ಸಾಹಿಸುತ್ತಾರೆ. ಯಾವುದೇ ಕಾರಣಕ್ಕೂ ದರ್ಶನ್​ರನ್ನು ಕೃಷಿ ಇಲಾಖೆ ರಾಯಭಾರಿ ಸ್ಥಾನದಿಂದ ಕೈ ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಪೋಲೀಸ್ ಇಲಾಖೆ ಯಾರ ಕೈನಲ್ಲೂ ಇಲ್ಲ. ಅವರ ಕೆಲಸ ಅವರು ಮಾಡುತ್ತಾರೆ. ರೆಕ್ಕೆಪುಕ್ಕ ಹುಟ್ಟಿಕೊಳ್ಳುತ್ತವೆ ಎಂಬ ಮಾತಿಗೆ ತಲೆ ಕಡೆಯುವೆ ಅಂದಿದ್ದಾರೆ ಅಷ್ಟೆ. ಅದು ಯಾರನ್ನೂ ಗಮನದಲ್ಲಿಟ್ಟುಕೊಂಡು ಹೇಳಿದ ಮಾತಲ್ಲ ಎಂದು ದರ್ಶನ್ ಹೇಳಿಕೆಯನ್ನು ಸಮರ್ಥಿಸಿಕೊಂಡರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net