

ಬೆಂಗಳೂರು: ಕೊಲೆ ಆರೋಪದಲ್ಲಿ ಜೈಲು ಸೇರಿರುವ ನಟ ದರ್ಶನ್ ರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವ ಬಗ್ಗೆ ಪೊಲೀಸ್ ಇಲಾಖೆ ತೀರ್ಮಾನ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ನಗರದ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಮಂಗಳವಾರ ವಿವಿಧ ಕಾಮಗಾರಿಗಳ ಭೂಮಿಪೂಜೆ ನೆರವೇರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೈಲಿನಲ್ಲಿ ನಟ ದರ್ಶನ್‌ಗೆ ವಿಶೇಷ ಸೌಲಭ್ಯ ನೀಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಈಗಾಗಲೇ 9 ಮಂದಿ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ ಎಂದರು.
ಈ ಪ್ರಕರಣ ಕುರಿತು ತನಿಖೆ ಕೈಗೊಳ್ಳಲಾಗಿದ್ದು, ವರದಿ ಆಧಾರದ ಮೇಲೆ ತಪ್ಪು ಮಾಡಿರುವ ಇನ್ನಷ್ಟು ಅಧಿಕಾರಿಗಳನ್ನು ಅಮಾನತು ಮಾಡಲಾಗುವುದು ಎಂದು ಹೇಳಿದರು.