

ಬೆಂಗಳೂರು: ಸ್ನೇಹಿತೆ ಪವಿತ್ರಾ ಗೌಡ ಅವರಿಗೆ ಅಶ್ಲೀಲ ಸಂದೇಶ ಕಳುಹಿಸಿದ್ದಾನೆ ಎಂದು ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಮಾಡಿದ್ದಾರೆ ಎನ್ನುವ ಪ್ರಕರಣದಲ್ಲಿ ನಟ ದರ್ಶನ್ ಜೈಲಿನನಲ್ಲಿದ್ದಾರೆ. ಈ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ ಇದೀಗ ಮತ್ತೊಂದು ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ವಿಚಾರಣಾಧೀನ ಖೈದಿಯಾಗಿರುವ ನಟ ದರ್ಶನ್ 65 ದಿನಗಳಿಂದ ಜೈಲಿನಲ್ಲಿದ್ದಾರೆ. ಆದರೆ ಈಗ ದರ್ಶನ್ ಕೆಲವರ ಜತೆ ಕುಳಿತು ಸಿಗರೇಟ್ ಸೇದುತ್ತಿರುವ ಫೋಟೋವೊಂದು ವೈರಲ್ ಆಗಿದೆ.
ಕೇಂದ್ರ ಕಾರಾಗೃಹ ಪರಪ್ಪನ ಅಗ್ರಹಾರದಲ್ಲಿ ಕುಳಿತು ಬೆಂಗಳೂರಿನ ರೌಡಿ ಶೀಟರ್ ವಿಲ್ಸನ್ ಗಾರ್ಡನ್ ನಾಗನ ಜೊತೆಗೆ ಕುಳಿತುಕೊಂಡು ದರ್ಶನ್ ಸಿಗರೇಟ್ ಸೇದುತ್ತಿರುವುದು ಫೋಟೋದಲ್ಲಿ ಕಂಡುಬಂದಿದೆ.
ಪ್ಲಾಸ್ಟಿಕ್ ಕುರ್ಚಿಯಲ್ಲಿ ಕುಳಿತುಕೊಂಡಿರುವ ದರ್ಶನ್, ಒಂದು ಕೈನಲ್ಲಿ ಟೀ ಕಪ್ ಮತ್ತು ಇನ್ನೊಂದು ಕೈನಲ್ಲಿ ಸಿಗರೇಟ್ ಹಿಡಿದುಕೊಂಡಿದ್ದಾನೆ. ಆತನ ಜೊತೆಗೆ ಮತ್ತೊಬ್ಬ ಕೈದಿಯಾಗಿರುವ ಮ್ಯಾನೇಜರ್ ನಾಗರಾಜ್ ಕೂಡ ಇದ್ದಾನೆ. ದರ್ಶನ್ ಕೂದಲು ತೆಗೆದಿರುವುದು ಫೋಟೋದಲ್ಲಿ ಕಂಡುಬಂದಿದೆ. ಮತ್ತೋರ್ವ ಕುಳ್ಳ ಸೀನ ಎಂದು ತಿಳಿದುಬಂದಿದೆ.ಮಾತ್ರವಲ್ಲ ಈ ಫೋಟೋ ಹೇಗೆ ಹೊರಗಡೆ ಬಂತು ಎಂಬ ಕಥೆ ಕೂಡ ಕುತೂಹಲವಾಗಿದೆ.