

ಮೈಸೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ, ನಟ ದರ್ಶನ್ ಗುರುವಾರ ಚಾಮುಂಡಿಬೆಟ್ಟಕ್ಕೆ ತೆರಳಿ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದರು.
ಬೆಟ್ಟಕ್ಕೆ ಪತ್ನಿ ವಿಜಯಲಕ್ಷ್ಮಿಯೊಂದಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ಬುಧವಾರ ಅವರು ಮಣಿಪಾಲ್ ಆಸ್ಪತ್ರೆಯಲ್ಲಿ ಬೆನ್ನು ನೋವು ಸಂಬಂಧ ವೈದ್ಯರನ್ನು ಭೇಟಿಯಾಗಿ ಚಿಕಿತ್ಸೆ ಪಡೆದಿದ್ದರು. ನಂತರ ಪಾಂಡವಪುರದ ಆರತಿ ಉಕ್ಕಡಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದರು.
ದರ್ಶನ್ ಬೆಟ್ಟಕ್ಕೆ ಭೇಟಿ ನೀಡುತ್ತಿರುವ ವಿಚಾರ ತಿಳಿದು ಅವರ ಅಭಿಮಾನಿಗಳು ನೂರಾರು ಸಂಖ್ಯೆಯಲ್ಲಿ ನೆರೆದಿದ್ದರು. ದರ್ಶನ್ ಪರವಾಗಿ ಜೈಕಾರ ಕೂಗಿ ಸಂಭ್ರಮಿಸಿದರು.