ಬಾಲರಾಮನ ಪ್ರಾಣ ಪ್ರತಿಷ್ಠಾ ದಿನವೇ ಮಗಳಿಗೆ ರುದ್ರಾಕ್ಷಿ , ಮಗ ಹಯಗ್ರೀವ ಎಂದು ಹೆಸರಿಟ್ಟ ಧ್ರುವ

dhruvasarja
Published on

ಬೆಂಗಳೂರು: ಅಯೋಧ್ಯೆ ರಾಮಮಂದಿರದಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠಾ ಕಾರ್ಯ ಇಂದು  ನೆರವೇರಿದೆ. ಈ ಶುಭಗಳಿಗೆಯಲ್ಲಿಯೇ ನಟ ಧ್ರುವ ಸರ್ಜಾ ಅವರು ತಮ್ಮ ಇಬ್ಬರು ಮಕ್ಕಳಿಗೆ ನಾಮಕರಣ ಮಾಡಿರುವುದು ವಿಶೇಷವಾಗಿದೆ.

ಅಯೋಧ್ಯೆ ಬಾಲರಾಮ ಪ್ರಾಣ ಪ್ರತಿಷ್ಠಾಪನೆ ವೇಳೆಯೇ ನಾಮಕರಣ ಶಾಸ್ತ್ರ ನಡೆದಿದ್ದು, ಮಕ್ಕಳಿಗೆ ವಿಶೇಷ ಮತ್ತು ಅರ್ಥಪೂರ್ಣವಾದ ಹೆಸರನ್ನೇ ಇಟ್ಟಿದ್ದಾರೆ. ನಟ ಧ್ರುವ ಸರ್ಜಾ ಮಗಳಿಗೆ ರುದ್ರಾಕ್ಷಿ ಮತ್ತು ಮಗನಿಗೆ ಹಯಗ್ರೀವ ಎಂದು ನಾಮಕರಣ ಮಾಡಿದ್ದಾರೆ. ಧ್ರುವ ಸರ್ಜಾ ಫಾರ್ಮ್ ಹೌಸ್ ನಲ್ಲಿ ನಾಮಕರಣ ಶಾಸ್ತ್ರ ನಡೆದಿದೆ.

ಇಂದು ಧ್ರುವ ಸರ್ಜಾ ಮಕ್ಕಳಿಗೆ ನಾಮಕರಣ ಮಾಡಿದ್ದರೆ, ಅನೇಕ ಮಹಿಳೆಯರು ಇಂದೇ ಹೆರಿಗೆ ಮಾಡಿಸುವಂತೆ ವೈದ್ಯರ ದುಂಬಾಲು ಬಿದ್ದಿರುವ ಘಟನೆಗಳು ನಡೆದಿವೆ. ರಾಮ ಮಂದಿರ ಉದ್ಘಾಟನೆ ದಿನವೇ ಹೆರಿಗೆ ಮಾಡಿಸಿಕೊಳ್ಳಲು ಹಲವರು ತಯಾರಿ ಕೂಡ ಮಾಡಿಕೊಂಡಿದ್ದರು.

ಧ್ರುವ ಸರ್ಜಾ ಕುಟುಂಬಸ್ಥರು ಆಂಜನೇಯನ ಭಕ್ತರು. ಆಂಜನೇಯ ಗುಡಿಯನ್ನೇ ಈ ಕುಟುಂಬ ನಿರ್ಮಾಣ ಮಾಡಿದೆ. ಧ್ರುವ ಸಿನಿಮಾದಲ್ಲಿ ಹನುಮನ ಕುರಿತಾಗಿ ಸನ್ನಿವೇಶವೋ, ಸಾಂಗ್​  ಇರುತ್ತದೆ. ಹನುಮನ ಉಸಿರಾಗಿರುವ ರಾಮನ ಮಂದಿರ ಉದ್ಘಾಟನೆ ದಿನದಂದು ತಮ್ಮ ಪುತ್ರಿ ಹಾಗೂ ಪುತ್ರನಿಗೆ ನಾಮಕರಣ ಮಾಡಿದ್ದು ವಿಶೇಷವಾಗಿದೆ. ಈ ಸುದ್ದಿ ಸೋಶಿಯಲ್​​ ಮೀಡಿಯಾದಲ್ಲಿ ವೈರಲ್​ ಆಗುತ್ತಿದ್ದಂತೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net