ನಟ ಧ್ರುವ ಸರ್ಜಾ ನೋಡಲು ಮುಗಿಬಿದ್ದ ಅಭಿಮಾನಿಗಳು

20-klr-8
Published on

ಮಾಲೂರು: ಪಟ್ಟಣದಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಬಂದಿದ್ದ ಸ್ಯಾಂಡಲ್​ವುಡ್ ನಟ ಧ್ರುವ ಸರ್ಜಾ ಅವರನ್ನು ನೋಡುವುದಕ್ಕೆ ಮುಗಿಬಿದ್ದ ಅಭಿಮಾನಿಗಳಿಗೆ ಪೊಲೀಸರು ಲಾಠಿ ರುಚಿ ತೋರಿಸಿರುವುದು ಶುಕ್ರವಾರ ನಡೆದಿದೆ.

ಪಟ್ಟಣದಲ್ಲಿ ಹಾರ್ಡ್​ವೇರ್ ಮಳಿಗೆ ಪ್ರಾರಂಭೋತ್ಸವಕ್ಕೆ ನಟ ಧ್ರುವ ಸರ್ಜಾ ಆಗಮಿಸುತ್ತಿರುವ ವಿಷಯ ತಿಳಿದ ಅಭಿಮಾನಿಗಳು ಸಹಸ್ರಾರು ಸಂಖ್ಯೆಯಲ್ಲಿ ರಸ್ತೆಯುದ್ದಕ್ಕೂ ನೆರೆದಿದ್ದರು. ಮಳಿಗೆ ಮುಂಭಾಗ, ಅಕ್ಕಪಕ್ಕದ ಕಟ್ಟಡಗಳು, ವಾಣಿಜ್ಯ ಸಂಕೀರ್ಣದ ಮೇಲೆ ನಿಂತಿದ್ದರು. ಮಾಲೂರು-ಹೊಸೂರು ರಸ್ತೆ ಕಿಲೋಮೀಟರ್ ಉದ್ದಕ್ಕೂ ಟ್ರಾಫಿಕ್ ಜಾಮ್ ಆಗಿತ್ತು.

ಎಸ್ಕಾರ್ಟ್ ಭದ್ರತೆಯಲ್ಲಿ ಅಗಮಿಸಿದ್ದ ಧ್ರುವ ಸರ್ಜಾ ನೆರೆದಿದ್ದ ಅಭಿಮಾನಿಗಳತ್ತ ಕೈ ಬೀಸಿದರು. ನಟನನ್ನು ನೋಡಲು ಮುಗಿಬಿದ್ದಿದ್ದ ಜನರನ್ನು ನಿಯಂತ್ರಿಸಲು ಪೊಲೀಸರು ಅನಿವಾರ್ಯವಾಗಿ ಲಘು ಲಾಠಿ ಪ್ರಹಾರ ನಡೆಸಿದರು. ಲಾಠಿ ಬೀಸುತ್ತಿದ್ದಂತೆ ಅಭಿಮಾನಿಗಳು ನೂಕು ನುಗ್ಗಲಾಟದೊಂದಿಗೆ ಚದುರಿ ಹೋದರು.

ಸಾವಿರಾರು ಸಂಖ್ಯೆಯಲ್ಲಿ ನಟನನ್ನು ನೋಡಲು ಬಂದಿದ್ದ ಅಭಿಮಾನಿಗಳ ನಡುವೆ ಕರೊನಾ ಮಾರ್ಗಸೂಚಿಯ ಪಾಲನೆಯ ಲವಲೇಶವೂ ಕಂಡುಬರಲಿಲ್ಲ. ಅನೇಕ ಅಭಿಮಾನಿಗಳು ಮಾಸ್ಕ್ ಧರಿಸಿರಲಿಲ್ಲ. ಕರೊನಾ ಮಹಾಮಾರಿಯಿಂದಾಗಿ ಇತ್ತೀಚೆಗೆ ಅಭಿಮಾನಿಗಳನ್ನು ಭೇಟಿಯಾಗಲು ಸಾಧ್ಯವಾಗಿರಲಿಲ್ಲ. ಇವತ್ತು ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳನ್ನು ನೋಡುತ್ತಿರುವುದಕ್ಕೆ ಖುಷಿಯಾಗಿದೆ ಎಂದು ನಟ ಧೃವ ಸರ್ಜಾ ಹರ್ಷ ವ್ಯಕ್ತಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net