ರಾಜ್ಯಸಭೆ ಸದಸ್ಯ ಜಗ್ಗೇಶ್ ಮನೆ ಒಳಗೆಲ್ಲ ಕೆಸರು; ಕಾವೇರಿ ನಿಗಮಕ್ಕೆ ನಟನ ವಿನಂತಿ..

Jaggesh House
Published on

ತುಮಕೂರು: ರಾಜ್ಯಾದ್ಯಂತ ಮಳೆ ಆರ್ಭಟಕ್ಕೆ ಹಲವೆಡೆ ಜನವಸತಿ ಪ್ರದೇಶಗಳು ಜಲಾವೃತಗೊಂಡಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಮಳೆ ನೀರು ನುಗ್ಗಿ ಉಂಟಾದ ಅವಾಂತರಕ್ಕೆ ಸಾರ್ವಜನಿಕರು ಚಿಂತೆಗೀಡಾಗಿದ್ದಾರೆ. ಈ ಸಮಸ್ಯೆಯ ಬಿಸಿ ಇದೀಗ ಜನಸಾಮಾನ್ಯರಿಗಷ್ಟೇ ಅಲ್ಲ, ಜನಪ್ರತಿನಿಧಿಗಳಿಗೂ ತಟ್ಟಿದೆ.

ಬಿಜೆಪಿ ಮುಖಂಡ, ರಾಜ್ಯಸಭೆಯ ಸದಸ್ಯ, ಖ್ಯಾತ ನಟ ನವರಸನಾಯಕ ಜಗ್ಗೇಶ್ ಕೂಡ ಈಗ ಇಂಥದ್ದೇ ಸಮಸ್ಯೆಯನ್ನು ಅನುಭವಿಸುತ್ತಿದ್ದು, ಅವರೂ ಸರ್ಕಾರಕ್ಕೆ ವಿನಂತಿ ಮಾಡಿಕೊಳ್ಳುವಂತಾಗಿದೆ. ಜಗ್ಗೇಶ್ ಅವರ ಊರು ತುಮಕೂರಿನ ಮಾಯಸಂದ್ರದಲ್ಲಿ ಈ ಸಮಸ್ಯೆ ಉಂಟಾಗಿದೆ. ಈ ಬಗ್ಗೆ ಅವರೇ ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡಿದ್ದಾರೆ.

ಮಾಯಸಂದ್ರದ ನನ್ನ ಮನೆ ಸಂಪೂರ್ಣ ಜಲಾವೃತವಾಗಿದೆ. ಬಹುತೇಕರು ನೀರು ಹರಿವ ಸರ್ಕಾರದ ಜಾಗದಲ್ಲಿ ಮನೆಕಟ್ಟಿ ನೀರು ಹರಿಯುವ ಹೊಂಡಗಳ ಮುಚ್ಚಿದ್ದಾರೆ. ಮಾಯಸಂದ್ರ ತಳಪ್ರದೇಶದಲ್ಲಿ ಇರುವ ಸುಮಾರು 20 ಆಸ್ತಿಗಳಿಗೆ ನಿರಂತರ ನೀರು ನುಗ್ಗುತ್ತದೆ ದಯಮಾಡಿ ಕಾವೇರಿ ನೀರಾವರಿ ನಿಗಮದವರು ಗಮನ ಹರಿಸಿ ಎಂಬುದಾಗಿ ಅವರು ಟ್ವೀಟ್ ಮೂಲಕ ವಿನಂತಿ ಮಾಡಿಕೊಂಡಿದ್ದಾರೆ. ಅಲ್ಲದೆ ತಮ್ಮ ಟ್ವೀಟ್​ನಲ್ಲಿ ಅವರು ಸಿಎಂ ಬಸವರಾಜ ಬೊಮ್ಮಾಯಿ ಅವರನ್ನೂ ಮೆನ್ಷನ್ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net