ಐ ಆಮ್​ ನಾಟ್​ ಎ ಪರ್ಫೆಕ್ಟ್​..ಹೇಗಿದ್ದೇನೆಯೋ ಹಾಗೆಯೇ ನನ್ನನ್ನು ಸ್ವೀಕರಿಸಿದ್ರಿ: ಕಿಚ್ಚ ಸುದೀಪ್

Kichcha Sudeep
Published on

ಬೆಂಗಳೂರು: ಸ್ಯಾಂಡಲ್​ವುಡ್​​ ನಟ, ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್  ಚಿತ್ರರಂಗಕ್ಕೆ ಕಾಲಿಟ್ಟು ಬರೋಬ್ಬರಿ 28 ವರ್ಷಗಳು ಕಳೆದಿವೆ. ಕಿಚ್ಚ 28 ವರ್ಷಗಳ ಸಿನಿ ಜರ್ನಿ ಕುರಿತಾಗಿ ಸೋಶಿಯಲ್​​ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಅಭಿಮಾನಿಗಳು ಶುಭಕೋರಿದ್ದಾರೆ.

ಸುದೀಪ್‌ ಸಿನಿ ರಂಗಕ್ಕೆ ಕಾಲಿಟ್ಟು ಇಂದಿಗೆ 28 ವರ್ಷಗಳು ಕಳೆದಿವೆ. ಈಗಾಗಲೇ 55ಕ್ಕೂ ಅಧಿಕ ಸಿನಿಮಾಗಳಿಗೆ ಬಣ್ಣ ಹಚ್ಚಿರುವ ಇವರು ಇದೀಗ ಮ್ಯಾಕ್ಸ್‌ ಸಿನಿಮಾ ಮೂಲಕ ಮತ್ತೆ ತೆರೆ ಮೇಲೆ ಮಿಂಚಲು ಸಜ್ಜಾಗಿದ್ದಾರೆ.

ಸುದೀಪ್​​ ಪತ್ರದಲ್ಲಿ ಏನಿದೆ?: ‘ಮನರಂಜನಾ ಕ್ಷೇತ್ರದಲ್ಲಿ 28 ವರ್ಷಗಳು ನನ್ನ ಜೀವನದ ಅತ್ಯಂತ ಸುಂದರ ಭಾಗವಾಗಿದೆ. ಈ ಸಾಟಿಯಿಲ್ಲದ ಉಡುಗೊರೆಗಾಗಿ ನಾನು ದೇವರಿಗೆ ಧನ್ಯವಾದ ಹೇಳುತ್ತೇನೆ. ನನ್ನ ಪೋಷಕರು, ಕುಟುಂಬ, ತಂತ್ರಜ್ಞರು, ನಿರ್ಮಾಪಕರು, ಬರಹಗಾರರು, ನನ್ನ ಸಹ-ನಟರು, ಮಾಧ್ಯಮ, ಮನರಂಜನಾ ಚಾನೆಲ್‌ಗಳು, ವಿತರಕರು, ಪ್ರದರ್ಶಕರು ಹಾಗೂ ನನ್ನ ಪ್ರಯಾಣದ ಭಾಗವಾಗಿರುವ ಪ್ರತಿಯೊಬ್ಬರಿಗೂ ಧನ್ಯವಾದಗಳು.

ನಾನು ಜೀವನದಲ್ಲಿ ಗಳಿಸಿದ ಅತ್ಯಂತ ಅಮೂಲ್ಯ ವಿಚಾರ ಎಂದರೆ ಅದು ಫ್ಯಾನ್ಸ್. ಅವರಿಗೂ ಧನ್ಯವಾದ. ಇದು ಏರಿಳಿತದ ಪ್ರಯಾಣ. ನಾನು ಪ್ರತಿ ಕ್ಷಣವನ್ನು ಆನಂದಿಸಿದೆ. ನಾನು ದೋಷರಹಿತನಲ್ಲ, ಪರಿಪೂರ್ಣನಲ್ಲ, ನಾನು ನನ್ನ ಕೈಲಾದಷ್ಟು ಪ್ರಯತ್ನಿಸಿದ್ದೇನೆ. ಅವಕಾಶಗಳು ಬಂದಾಗ ನನ್ನ ಕೈಲಾಗಿದ್ದನ್ನು ನೀಡಿದ್ದೇನೆ. ನಾನು ಹೇಗಿದ್ದೇನೆಯೋ ಹಾಗೆಯೇ ನನ್ನನ್ನು ಸ್ವೀಕರಿಸಿದ್ದಕ್ಕಾಗಿ ಎಲ್ಲರಿಗೂ ಧನ್ಯವಾದಗಳು. ನಾನು ಕಂಠೀರವ ಸ್ಟುಡಿಯೋದಲ್ಲಿ ಅಂಬರೀಷ್​ ಅವರೊಂದಿಗೆ ಬ್ರಹ್ಮ ಚಿತ್ರದ ಶೂಟಿಂಗ್ ಆರಂಭಿಸಿದೆ. ಕೆಲವೇ ವರ್ಷಗಳ ಹಿಂದೆ ಇದು ನಡೆದಿದೆ ಎಂಬ ಭಾವನೆ. ಆದರೆ, ಈಗಾಗಲೇ ಇದಕ್ಕೆ 28 ವರ್ಷಗಳು ತುಂಬಿವೆ. ಎಲ್ಲರಿಗೂ ಧನ್ಯವಾದ’ ಎಂದು ಸುದೀಪ್ ಬರೆದುಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net