

ಬೆಂಗಳೂರು: ‘ವಾರಸ್ದಾರ’ ಧಾರಾವಾಹಿ ಚಿತ್ರೀಕರಣಕ್ಕೆ ಬಳಸಿಕೊಂಡಿದ್ದ ಮನೆ ಬಾಡಿಗೆ ಪಾವತಿಸದ ಆರೋಪಕ್ಕೆ ಸಂಬಂಧಿಸಿದಂತೆ ನಿರ್ವಮಕ ಸುದೀಪ್ ವಿರುದ್ಧ ಚಿಕ್ಕಮಗಳೂರಿನ ಜೆಎಂಎಫ್ಸಿ ಕೋರ್ಟ್ ನಲ್ಲಿದ್ದ ಕ್ರಿಮಿನಲ್ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ. ಪ್ರಕರಣದ ವಿಚಾರಣೆ ರದ್ದುಕೋರಿ ಸುದೀಪ್ ಸಲ್ಲಿಸಿದ್ದ ಅರ್ಜಿಯನ್ನು ಇತ್ತೀಚೆಗೆ ಮಾನ್ಯ ಮಾಡಿರುವ ನ್ಯಾ.ಬಿ.ಎ. ಪಾಟೀಲ್ ಅವರಿದ್ದ ಪೀಠ, ಅರ್ಜಿದಾರರ ವಿರುದ್ಧದ ಆರೋಪಗಳು ಸಿವಿಲ್ ಸ್ವರೂಪದ್ದಾಗಿದ್ದು, ಕ್ರಿಮಿನಲ್ ಪ್ರಕರಣ ದಾಖಲಿಸಿರುವುದು ಕಾನೂನಿನ ದುರ್ಬಳಕೆಯಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದೆ.