ಅಭಿಮಾನಿಗಳ ಕುಟುಂಬದ ಭೇಟಿಗೆ ಸೂರಣಗಿಯತ್ತ ನಟ ಯಶ್

YASH FINAL
Published on

ಗದಗ: ಚಿತ್ರನಟ ಯಶ್ ಜನ್ಮದಿನದ ಹಿನ್ನೆಲೆಯಲ್ಲಿ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ಬೃಹತ್ ಕಟೌಟ್ ಅಳವಡಿಸುವ ವೇಳೆ ವಿದ್ಯುತ್ ಪ್ರವಹಿಸಿ ಮೂವರು ಅಭಿಮಾನಿಗಳು ಸ್ಥಳದಲ್ಲಿಯೇ ಮೃತಪಟ್ಟ ಹಿನ್ನೆಲೆಯಲ್ಲಿ ಗ್ರಾಮದತ್ತ ನಟ್ ಯಶ್ ಹೊರಟಿದ್ದಾರೆ.
ಹುಬ್ಬಳ್ಳಿಗೆ ಬಂದಿರುವ ಯಶ್ ಅಲ್ಲಿಂದ ಸೂರಣಗಿಯತ್ತ ಪ್ರಯಾಣ ಬೆಳೆಸಿದ್ದಾರೆ. ಕೆಲವೇ ಕ್ಷಣಗಳಲ್ಲಿ ಗ್ರಾಮ ತಲುಪುವ ಸಾಧ್ಯತೆ ಇದೆ. ಮೃತಪಟ್ಟ ಮೂವರು ಅಭಿಮಾನಿಗಳ ಕುಟುಂಬಕ್ಕೆ ಸಾಂತ್ವನ ಹೇಳಲಿದ್ದಾರೆ. ಯಶ್ ಭೇಟಿ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದಾರೆ. ಗ್ರಾಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net