ನಟಿ ತಾರಾ, ಡಾ.ಮೀನಾಕ್ಷಿ ಬಾಳಿ, ವೇದರಾಣಿ ದಾಸನೂರಗೆ ಗೌರವ ಡಾಕ್ಟರೇಟ್ ಪ್ರದಾನ

KSWU CONVOCATION DOCTORATE
ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿವಿಯ ಜ್ಞಾನ ಶಕ್ತಿ ಆವರಣದಲ್ಲಿ ಹಮ್ಮಿಕೊಂಡಿದ್ದ 16ನೇ ಘಟಿಕೋತ್ಸವದಲ್ಲಿ ನಟಿ ತಾರಾ ಅನೂರಾಧ, ಡಾ.ಮೀನಾಕ್ಷಿ ಬಾಳಿ ಹಾಗೂ ವೇದರಾಣಿ ದಾಸನೂರ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು. ಕುಲಪತಿ ಬಿ.ಕೆ. ತುಳಸಿಮಾಲ, ಕುಲಸಚಿವ ಶಂಕರಗೌಡ ಸೋಮನಾಳ, ಪ್ರೊ.ಶಶಿಕಲಾ ವಂಜಾರಿ ಮತ್ತಿತರರಿದ್ದಾರೆ.
Published on

ವಿಜಯಪುರ: ಖ್ಯಾತ ಲೇಖಕಿ, ಹೋರಾಟಗಾರ್ತಿ, ಚಿಂತಕಿ ಹಾಗೂ ಸಾಮಾಜಿಕ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸಿರುವ ಕಲಬುರಗಿಯ ಡಾ.ಮೀನಾಕ್ಷಿ ಬಾಳಿ, ಕನ್ನಡ ಚಲನಚಿತ್ರ ರಂಗದಲ್ಲಿ ಸಕ್ರಿಯವಾಗಿರುವ ನಟಿ ತಾರಾ ಹಾಗೂ ಹಾವೇರಿ ಜಿಲ್ಲೆಯ ಶಿಗ್ಗಾಂವಿಯ ಉತ್ಸವ್ ರಾಕ್ ಗಾರ್ಡನ್ ಸಂರಕ್ಷಿಸುವ ಮತ್ತು ಅಭಿವೃದ್ಧಿಪಡಿಸುವ ಜವಾಬ್ದಾರಿ ಹೊತ್ತಿರುವ ವೇದರಾಣಿ ದಾಸನೂರ ಇವರಿಗೆ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿವಿಯಿಂದ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು.

ತೊರವಿಯ ಜ್ಞಾನಶಕ್ತಿ ಆವರಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿವಿಯ 16ನೇ ಘಟಿಕೋತ್ಸವದಲ್ಲಿ ಕುಲಪತಿ ಬಿ.ಕೆ. ತುಳಸಿಮಾಲ, ಕುಲಸಚಿವ ಶಂಕರಗೌಡ ಸೋಮನಾಳ ಮತ್ತಿತರರು ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಗೌರವ ಡಾಕ್ಟರೇಟ್ ಪ್ರದಾನ ಮಾಡಿದರು.

ಜೊತೆಗೆ 63 ವಿದ್ಯಾರ್ಥಿನಿಯರಿಗೆ 80 ಚಿನ್ನದ ಪದಕ ಪ್ರದಾನ ಮಾಡಲಾಯಿತು. ಇನ್ನುಳಿದಂತೆ ಸ್ನಾತಕ, ಸ್ನಾತಕೋತ್ತರ ಹಾಗೂ ಪಿಎಚ್‌ಡಿ ಪದವಿ ಪ್ರದಾನ ಮಾಡಲಾಯಿತು. ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್ ಅನುಪಸ್ಥಿತಿ ಪ್ರಶಸ್ತಿ, ಪದಕ ಹಾಗೂ ಪ್ರಮಾಣ ಪತ್ರ ಪಡೆದ ಸಾಧಕಿಯರಿಗೆ ನಿರಾಸೆಯನ್ನುಂಟು ಮಾಡಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net