

ಆರ್ ಎಸ್ ಎಸ್ ಸಮನಘಚಾಲಕ ಅರವಿಂದರಾವ ದೇಶಪಾಂಡೆ ಬೇಸರ
ಬೆಳಗಾವಿ:ಕ್ರೆಡಿಟ್ ಸೌಹಾರ್ದ ಸಹಕಾರಿ ಬ್ಯಾಂಕ್‌ಗಳು ಕೇವಲ ಠೇವಣಿ ಸಂಗ್ರಹ, ಸಾಲ ನೀಡಲು ಸೀಮಿತವಾಗಬಾರದು. ಸಹಕಾರಿ ವೈದ್ಯಕೀಯ ಕಾಲೇಜು, ಆಸ್ಪತ್ರೆ ಹಾಗೂ ಕೈಗಾರಿಕೆಗಳ ಸ್ಥಾಪನೆಗೆ ಮುಂದಾಗಬೇಕು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಉತ್ತರ ಕರ್ನಾಟದ ಸಹಪ್ರಾಂತ ಸಂಘಚಾಲಕ ಅರವಿಂದರಾವ ದೇಶಪಾಂಡೆ ಹೇಳಿದರು.
ನಗರದ ಕೊನವಾಳ ಗಲ್ಲಿಯ ಲೋಕಮಾನ್ಯ ಮಂದಿರದಲ್ಲಿ ಶನಿವಾರ ಏರ್ಪಡಿಸಿದ್ದ ದಿ. ಬೆಲಗಾಮ ಅರ್ಬನ್ ಕ್ರೆಡಿಟ್ ಸೌಹಾರ್ದ ಸಹಾಕರಿ ಸಂಘದ ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ದೇಶದ ಸಮಗ್ರ ಅಭಿವೃದ್ಧಿಯಲ್ಲಿ , ಆರ್ಥಿಕ ಕ್ಷೇತ್ರದಲ್ಲಿ ಸಹಕಾರಿ ರಂಗ ಪ್ರಮುಖ ಪಾತ್ರ ವಹಿಸುತ್ತಿದೆ. ಹಾಗಾಗಿ ಸಹಕಾರ ರಂಗವು ತನ್ನ ಕ್ಷೇತ್ರವನ್ನು ಎಲ್ಲ ಕಡೆ ವಿಸ್ತರಿಸಿಕೊಳ್ಳಬೇಕು ಎಂದರು.
ಸಹಕಾರಿ ಕ್ಷೇತ್ರದಲ್ಲಿ ನಿಶ್ವಾರ್ಥ, ಪ್ರಾಮಾಣಿಕೆ, ಪಾರದರ್ಶಕ ಆಡಳಿತ ಹೊಂದಿದ್ದರೆ ಮಾತ್ರ ಯಾವುದೇ ಕಪ್ಪು ಚುಕ್ಕೆ ಇಲ್ಲದೆ ಆರ್ಥಿಕ ವಲಯ ನಡೆಸಲು ಸಾಧ್ಯ.ಆದರೆ, ಸಹಕಾರ ಸಂಗದಲ್ಲಿನ ಸಹಕಾರಿಗಳು ಸ್ವಕಾರಿಗಳಾಗಿದ್ದರಿಂದ ಸಕ್ಕರೆ ಕಾರ್ಖಾನೆಗಳು, ಬ್ಯಾಂಕ್‌ಗಳು ಸಂಪೂರ್ಣ ದಿವಾಳಾಗಿವೆ. ಅಲ್ಲದೆ, ಸಹಕಾರಿ ಕಾರ್ಖಾನೆಗಳನ್ನು ಖಾಸಗಿ ವ್ಯಕ್ತಿಗಳು ಖರೀದಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಹಾಗಾಗಿ ಸಹಕಾರ ಕ್ಷೇತ್ರದಲ್ಲಿ ಪ್ರಾಮಾಣಿಕತೆ, ಪಾರದರ್ಶಕ ಆಡಳಿತ ಮುಖ್ಯವಾಗಿದೆ. ಈ ಕುರಿತು ಎಲ್ಲ ಸಹಕಾರಿಗಳು ಯೋಚನೆ ಮಾಡಬೇಕು ಎಂದು ತಿಳಿಸಿದರು.