ಜಿಲ್ಲಾಧ್ಯಕ್ಷರಾಗಿ ಆದಂ ನೇಮಕ

adam
Published on

ಮಡಿಕೇರಿ:

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಬೀದಿ ಬದಿ ವ್ಯಾಪಾರಿಗಳ ವಿಭಾಗದ ಕೊಡಗು ಜಿಲ್ಲಾಧ್ಯಕ್ಷರಾಗಿ ಎಸ್. ಆದಂ ಅವರನ್ನು ನೇಮಿಸಲಾಗಿದೆ.

ಮಡಿಕೇರಿಯ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಈ ನೇಮಕದ ಆದೇಶ ಪತ್ರವನ್ನು ಆದಂ ಅವರಿಗೆ ಹಸ್ತಾಂತರಿಸಿದರು.

ಮಡಿಕೇರಿ ಶಾಸಕ ಡಾ.ಮಂತರ್ ಗೌಡ, ವೀರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಾಜ್ಯ ಉಪಾಧ್ಯಕ್ಷ ಮೆರೋಜ್ ಖಾನ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ಮತ್ತಿತರರು ಈ ಸಂದರ್ಭ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net