ವಿನಾಯಕ ಹಿರೇಮಠಗೆ ಆದರ್ಶ ಉಪಾಧ್ಯಾಯ ಪ್ರಶಸ್ತಿ

1 DWD 2 (Vinayak Patil)
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ತಾಲೂಕಿನ ಅಮ್ಮಿನಬಾವಿ ಗ್ರಾಮದ ಸುಶಿಲಾತಾಯಿ ಅಜ್ಜಯ್ಯ ಹಿರೇಮಠ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ವಿನಾಯಕ ಹಿರೇಮಠ ಅವರು ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಸಮಗ್ರ ಕರ್ನಾಟಕ ಉಪಾಧ್ಯಾಯರ ಪ್ರಗತಿಪರ ಸಂಘವು ಕೊಡಮಾಡುವ ಆದರ್ಶ ಉಪಾಧ್ಯಾಯ ಪ್ರಶಸ್ತಿಗೆ ಭಾಜನರಾಗಿದ್ದಾರೆ. ನಗರದ ಶಿವಾಜಿ ವೃತ್ತದಲ್ಲಿರುವ ಕೆ.ಇ. ಬೋರ್ಡ್ನ ಪದವಿ ಕಾಲೇಜಿನಲ್ಲಿ ಸಮಗ್ರ ಕರ್ನಾಟಕ ಉಪಾಧ್ಯಾಯರ ಪ್ರಗತಿಪರ ಸಂಘದ ಜಿಲ್ಲಾ ಘಟಕದ ಉದ್ಘಾಟನಾ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net