ಶಿಕ್ಷಕರಿಂದ ಸ್ವಸ್ಥ ಸಮಾಜ ನಿರ್ಮಾಣ ಸಾಧ್ಯ: ಗುರ್ಮೆ ಸುರೇಶ್​ ಶೆಟ್ಟಿ

udp-adarsha
Published on

ಉಡುಪಿ: ಜಾತಿ-ಧರ್ಮಗಳ ಭೇದವಿಲ್ಲದೆ ಮನಸ್ಸುಗಳನ್ನು ಕಟ್ಟಿಕೊಡುವ ಕೆಲಸವನ್ನು ಶಿಕ್ಷಕರು ಮಾಡಬೇಕು. ಇದರಿಂದ ಮಾತ್ರ ಸ್ವಸ್ಥ ಸಮಾಜ ನಿರ್ಮಾಣ ಸಾಧ್ಯ ಎಂದು ಶಾಸಕ ಗುರ್ಮೆ ಸುರೇಶ್​ ಶೆಟ್ಟಿ ಹೇಳಿದರು.

ಭಾನುವಾರ ಅಲೆವೂರು ಆದರ್ಶ ಸಮೂಹ ವಿದ್ಯಾಸಂಸ್ಥೆಗಳ ಸಂಕೀರ್ಣದಲ್ಲಿ ಆದರ್ಶ ಚಾರಿಟೇಬಲ್​ ಟ್ರಸ್ಟ್​, ಉಡುಪಿ, ಆದರ್ಶ ಕಾಲೇಜ್​ ಆಫ್​ ನರ್ಸಿಂಗ್​, ಆದರ್ಶ ಇನ್ಸ್ಟಿಟ್ಯೂಟ್​ ಆಫ್​ ಅಲೈಡ್​ ಹೆಲ್ತ್​ ಸೈನ್ಸಸ್​, ಆದರ್ಶ ಪ್ಯಾರಮೆಡಿಕಲ್​ ಕಾಲೇಜು, ಆದರ್ಶ ಆಸ್ಪತ್ರೆ, ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಆಯೋಜಿಸಲಾದ ಶಿಕ್ಷಕರ ದಿನಾಚರಣೆ ಮತ್ತು ಆದರ್ಶ ಶಿಕ್ಷಕ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ಆದರ್ಶ ಸಂಸ್ಥೆ ಸಮಾಜ ಕಟ್ಟುವ ಕಾರ್ಯದಲ್ಲಿ ನಿರತರಾದ ಶಿಕ್ಷಕರನ್ನು ಗುರುತಿಸಿ ಗೌರವಿಸಿರುವುದು ಶ್ಲಾನೀಯ ಕಾರ್ಯ ಎಂದರು. ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ ಕಾರ್ಯಕ್ರಮ ಉದ್ಘಾಟಿಸಿ, ಪಠ್ಯ ವಿಷಯಗಳ ಹೊರತಾಗಿಯೂ ಮಕ್ಕಳಲ್ಲಿ ದಕ್ಷತೆ, ಪ್ರಾಮಾಣಿಕತೆ, ಪರಿಶ್ರಮ ಮತ್ತು ಜೀವನ ಮೌಲ್ಯಗಳನ್ನು ಬೋಧಿಸುವುದು ಇಂದಿನ ಅಗತ್ಯ. ಈ ನಿಟ್ಟಿನಲ್ಲಿ ಶಿಕ್ಷಕರು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಉಡುಪಿ ಜಿಲ್ಲೆಯ ಶೈಕ್ಷಣಿಕ ಪ್ರಗತಿಯಲ್ಲಿ ಪ್ರತಿ ಶಿಕ್ಷಕರ ಯೋಗದಾನ ಮಹತ್ವದ್ದಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದಲ್ಲಿ ಸರ್ಕಾರಿ, ಅನುದಾನಿತ, ಅನುದಾನ ರಹಿತ ವಲಯಗಳ 30 ಶಿಕ್ಷಕರಿಗೆ ಹಾಗೂ ಸಿಬಿಎಸ್​ಇ ಶಾಲೆಗಳ 6 ಶಿಕ್ಷಕರಿಗೆ "ಆದರ್ಶ ಶಿಕ್ಷಕ' ಪ್ರಶಸ್ತಿ ನೀಡಲಾಯಿತು. ಮಾಜಿ ಸಚಿವ ಪ್ರಮೋದ್​ ಮಧ್ವರಾಜ್​, ಅಲೆವೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಯತೀಶ್​ ಕುಮಾರ್​, ಅಪರ ಜಿಲ್ಲಾಧಿಕಾರಿ ಅಬಿದ್​ ಗದ್ಯಾಳ್​, ಆದರ್ಶ ಆಸ್ಪತ್ರೆಯ ವೈದ್ಯಕಿಯ ನಿರ್ದೇಶಕ ಡಾ. ಚಂದ್ರಶೇಖರ್​, ಆದರ್ಶ ಆಸ್ಪತ್ರೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಮಲಾ ಚಂದ್ರಶೇಖರ್​, ಜಿಲ್ಲಾ ಕಾಂಗ್ರೆಸ್​ ಅಧ್ಯಕ್ಷ ಅಶೋಕ್​ಕುಮಾರ್​ ಕೊಡವೂರು, ಉಡುಪಿ ಎಪಿಐ ಅಧ್ಯಕ್ಷ ಡಾ.ಸುರೇಶ ಹೆಗ್ಡೆ, ಶಾಲಾ ಶಿಕ್ಷಣ ಇಲಾಖೆ ಜಿಲ್ಲಾ ಉಪನಿರ್ದೇಶಕ ಲೋಕೇಶ್​ ಸಿ., ಆಸ್ಪತ್ರೆಯ ನಿರ್ದೇಶಕ ಡಾ.ಸುಹಾಸ್​ ಜಿ.ಸಿ., ಕಾಲೇಜಿನ ಪ್ರಾಂಶುಪಾಲೆ ಸುದೀನಾ, ಇನ್​ಸ್ಟಿಟ್ಯೂಟ್​ನ ಪ್ರೊ.ರವಿಕುಮಾರ್​ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net