ಅಪಘಾತಕ್ಕೀಡಾದ ಎಡಿಸಿ ಕಾರು

14 vikram 4
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ಜಿಲ್ಲಾ ಉಸ್ತುವಾರಿ ಸಚಿವರು ಮಳೆ ಹಾನಿ ವೀಕ್ಷಣೆ ಬಳಿಕ ಧಾರವಾಡಕ್ಕೆ ಆಗಮಿಸುತ್ತಿದ್ದ ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಅವರ ಕಾರು ಅಪಘಾತಕ್ಕೀಡಾದ ಘಟನೆ ಬ್ಯಾಹಟ್ಟಿ ಗ್ರಾಮದ ಬಳಿ ಶನಿವಾರ ನಡೆದಿದೆ.

ಅಪರ ಜಿಲ್ಲಾಧಿಕಾರಿ ಅವರ ಕಾರು ಕ್ಯಾಂಟರ್​ ಹಿಂದಿಕ್ಕಿ ಸಾಗುವ ಸಮಯದಲ್ಲಿ ಈ ಘಟನೆ ನಡೆದಿದೆ. ಸಿಲಿಂಡರ್​ ಹೊತ್ತೊಯ್ಯುತ್ತಿದ್ದ ಕ್ಯಾಂಟರ್​ ಹಿಂದಿಕ್ಕುವ ಸಮಯದಲ್ಲಿ ಒಮ್ಮೆಲೆ ಕಾರಿಗೆ ಡಿಕ್ಕಿ ಹೊಡೆದಿದೆ. ಇದರಿಂದ ಕಾರಿನ ಎಡ ಭಾಗಕ್ಕೆ ಹಾನಿಯಾಗಿದೆ. ಅದೃಷ್ಟವಶಾತ್​ ಯಾವುದೇ ಅಪಾಯ ಸಂಭವಿಸಿಲ್ಲ.

ಘಟನೆ ಬಳಿಕ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮಾಹಿತಿ ಕಲೆ ಹಾಕಿದ್ದು, ಕ್ಯಾಂಟರ್​ ವಶಕ್ಕೆ ಪಡೆದಿದ್ದಾರೆ. ನಂತರ ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಅವರು ಬೇರೊಂದು ಕಾರಿನಲ್ಲಿ ಧಾರವಾಡಕ್ಕೆ ಆಗಮಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net