ಎಸ್ಸೆಸ್ಸೆಲ್ಸಿ ಪರೀಕ್ಷೆ-2ರ ಪೂರ್ವಭಾವಿ ಸಭೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಸುಗಮವಾಗಿ ನಡೆಸಲು ಎಡಿಸಿ ಸೂಚನೆ

RAICHUR
RAICHUR
Published on

ರಾಯಚೂರು ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ-2 ಮೇ 26 ರಿಂದ ಜೂ.2 ರವರೆಗೆ ನಡೆಯಲಿದ್ದು, ಪರೀಕ್ಷೆಯು ಯಾವುದೇ ಲೋಪದೋಷವಿಲ್ಲದೆ ಸುಗಮವಾಗಿ ನಡೆಸುವಂತೆ ಎಡಿಸಿ ಶಿವಾನಂದ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನ ನೀಡಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಬುಧವಾರ ಎಸ್ಸೆಸ್ಸೆಲ್ಸಿ ಪರೀಕ್ಷೆ-2ರ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾದ ಒಟ್ಟು 16,058 ವಿದ್ಯಾರ್ಥಿಗಳು ಪರೀಕ್ಷೆ-2 ಬರೆಯಲು ಹೆಸರು ನೋಂದಾಯಿಸಿದ್ದಾರೆ. ಪ್ರತಿಯೊಂದು ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಟಿವಿಗಳನ್ನು ಅಳವಡಿಸಲಾಗಿದೆ ಹಾಗೂ ಜಿಲ್ಲಾ ಹಂತದ ವೆಬ್ ಕಾಸ್ಟಿಂಗ್ ಮಾಡಿ ವೀಕ್ಷಿಸಲು ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಬ್ಲಾಕ್ ಹಂತದಲ್ಲಿ ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಕೊಠಡಿ ಮೇಲ್ವಿಚಾರಕರನ್ನು ನೇಮಿಸಿದ್ದು, ಪ್ರತಿ ಬ್ಲಾಕ್‌ಗಳಿಗೆ ಓರ್ವ ಬ್ಲಾಕ್ ಎಸ್ಸೆಸ್ಸೆಲ್ಸಿ ನೋಡಲ್ ಅಧಿಕಾರಿಗಳನ್ನು ಸಹ ನೇಮಕ ಮಾಡಿಕೊಳ್ಳಲಾಗಿದೆ ಎಂದರು.

ಪರೀಕ್ಷಾ ಕೇಂದ್ರಗಳಲ್ಲಿ ಮೊಬೈಲ್‌ಗಳನ್ನು ಕಡ್ಡಾಯವಾಗಿ ನಿಷೇಧಿಸಲಾಗಿದ್ದು, ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಹಾಗೂ ಪರೀಕ್ಷಾ ಕೇಂದ್ರಗಳ ಹತ್ತಿರದಲ್ಲಿರುವ ಜೆರಾಕ್ಸ್ ಮತ್ತು ಸೈಬರ್ ಕೇಂದ್ರಗಳನ್ನು ಪರೀಕ್ಷೆ ಸಮಯದಲ್ಲಿ ಮುಚ್ಚಿಸಲು ಆದೇಶ ಹೊರಡಿಸಿ ಬಿಗಿ ಬಂದೋಬಸ್ತ್ ಮಾಡಲಾಗಿದೆ ಎಂದರು.

ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಕೆ.ಬಿ.ಬಡಿಗೇರ ಮಾತನಾಡಿ, ಪರೀಕ್ಷೆಯು ಜಿಲ್ಲೆಯ ದೇವದುರ್ಗ 08, ಲಿಂಗಸೂಗೂರು 11, ಮಾನವಿ 09, ರಾಯಚೂರು 16 ಹಾಗೂ ಸಿಂಧನೂರು 07 ಸೇರಿದಂತೆ ಒಟ್ಟು 51 ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದರು.

ಈ ಸಂದರ್ಭದಲ್ಲಿ ವಿವಿಧ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net