ಗಾಂಧಿ ಜಯಂತಿಗೆ ಹಾಜರಾಗಿ ಕಡ್ಡಾಯ: ಎಡಿಸಿ ಡಾ.ಎಚ್.ಎಲ್.ನಾಗರಾಜು ಸೂಚನೆ

21_09_Mdy_02(Adc Meeting)
Published on

ಮಂಡ್ಯ: ಜಿಲ್ಲೆಯಲ್ಲಿ ಅ.2ರಂದು ಜಿಲ್ಲಾಧಿಕಾರಿ ಕಚೇರಿ ಮುಂಭಾಗದ ಉದ್ಯಾನದಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹುದ್ದೂರ್ ಶಾಸ್ತ್ರಿ ಅವರ ಜಯಂತ್ಯುತ್ಸವ ಆಯೋಜಿಸಲಾಗಿದೆ. ಜಿಲ್ಲಾ ಮಟ್ಟದ ಎಲ್ಲ ಅಧಿಕಾರಿ ಹಾಗೂ ಸಿಬ್ಬಂದಿ ಕಾರ್ಯಕ್ರಮಕ್ಕೆ ಕಡ್ಡಾಯವಾಗಿ ಹಾಜರಾಗಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು ಸೂಚನೆ ನೀಡಿದರು.

ನಗರದ ಜಿಲ್ಲಾ ಪಂಚಾಯಿತಿ ಕಚೇರಿಯ ಕಾವೇರಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅಂದು ಗಾಂಧೀಜಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ. ಶಾಲಾ ಮಕ್ಕಳಿಂದ ಭಜನೆ, ಮಹಾತ್ಮಗಾಂಧೀಜಿ ಹಾಗೂ ಲಾಲ್ ಬಹುದ್ದೂರ್ ಶಾಸ್ತ್ರಿ ಅವರ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ಆಯೋಸಲಾಗುವುದು. ಎಲ್ಲ ಧರ್ಮದ ಗುರುಗಳನ್ನು ಆಹ್ವಾನಿಸಿ ಸರ್ವಧರ್ಮ ಪ್ರಾರ್ಥನೆ ಆಯೋಜಿಸಲು ಕ್ರಮ ವಹಿಸಿ ಎಂದು ತಿಳಿಸಿದರು. ಸಭೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಸಹಾಯಕ ಸ್ವಾಮಿಗೌಡ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net