ಸರ್ಕಾರಿ ಕ್ರೀಡಾ ವಿದ್ಯಾರ್ಥಿ ನಿಲಯಕ್ಕೆ ಎಡಿಸಿ ದಿಢೀರ್ ಭೇಟಿ

15
Published on

ಮೈಸೂರು: ನಗರದ ಸರ್ಕಾರಿ ಕ್ರೀಡಾ ವಿದ್ಯಾರ್ಥಿ ನಿಲಯಕ್ಕೆ ಮೈಸೂರು ತಾಲೂಕಿನ ಉಸ್ತುವಾರಿ ಅಧಿಕಾರಿಯೂ ಆಗಿರುವ ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಬುಧವಾರ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮುಖ್ಯ ಕಾರ್ಯದರ್ಶಿಗಳ ನಿರ್ದೇಶನದ ಮೇರೆಗೆ ಡಾ.ಪಿ.ಶಿವರಾಜು ಅವರು, ನಗರದ ಕ್ರೀಡಾ ಹಾಸ್ಟೆಲ್ಗೆ ಭೇಟಿ ನೀಡಿ ಸರ್ಕಾರದ ಸವಲತ್ತುಗಳನ್ನು ಸಮರ್ಪಕವಾಗಿ ವಿದ್ಯಾರ್ಥಿಗಳಿಗೆ ಒದಗಿಸುವಂತೆ ಸೂಚನೆ ನೀಡಿದರು.

ಅಲ್ಲದೆ ಕ್ರೀಡಾ ವಿದ್ಯಾರ್ಥಿ ನಿಲಯಕ್ಕೆ ನೀಡಿರುವ ಅಗತ್ಯ ಮೂಲ ಸೌಲಭ್ಯಗಳನ್ನು ಪರಿಶೀಲಿಸಿದರು. ಸರ್ಕಾರದಿಂದ ನೀಡುತ್ತಿರುವ ಆಹಾರ ಹಾಗೂ ಇನ್ನಿತರ ಸೌಲಭ್ಯಗಳನ್ನು ವಾಸ್ತವ್ಯವಿರುವ ಕ್ರೀಡಾ ವಿದ್ಯಾರ್ಥಿಗಳಿಗೆ ಕ್ರಮಬದ್ಧವಾಗಿ ದೊರಕಿಸಬೇಕು. ಅಲ್ಲದೆ ಕ್ರೀಡಾ ಕ್ಷೇತ್ರದಲ್ಲಿ ಮೈಸೂರು ಜಿಲ್ಲೆಯ ಈ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿಗಳು ಹೆಚ್ಚಿನ ಸಾಧನೆ ಮಾಡುವ ನಿಟ್ಟಿನಲ್ಲಿ ಅಗತ್ಯ ನೆರವು ನೀಡುವಂತೆ ಸೂಚಿಸಿದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಭಾಸ್ಕರ್ ನಾಯಕ್, ಕ್ರೀಡಾ ಹಾಸ್ಟೆಲ್ನ ನಿಲಯಪಾಲಕರು, ಕ್ರೀಡಾ ತರಬೇತುದಾರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net