ವಿಶ್ವಕರ್ಮ ಜಯಂತಿಗೆ ಸಿದ್ಧತೆ ಕೈಗೊಳ್ಳಿ

ADC sidrameswara koppal meeting viswakarma
Published on

ಕೊಪ್ಪಳ: ಜಿಲ್ಲಾಡಳಿತದಿಂದ ಸೆ.18ರಂದು ವಿಶ್ವಕರ್ಮ ಜಯಂತಿಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಿ ಎಂದು ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಅಧಿಕಾರಿಗಳಿಗೆ ಸೂಚಿಸಿದರು.

ಜಯಂತಿ ಆಚರಣೆ ಅಂಗವಾಗಿ ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.

ಜಿಲ್ಲಾ, ತಾಲೂಕು ಕಚೇರಿ, ಗ್ರಾಪಂಗಳು, ಶಾಲಾ&ಕಾಲೇಜು, ವಸತಿ ನಿಲಯಗಳಲ್ಲಿ ಜಯಂತಿ ಕಡ್ಡಾಯವಾಗಿ ಆಚರಿಸಬೇಕು. ಸೆ.17ರಂದು ಕಲ್ಯಾಣ ಕರ್ನಾಟಕ ಉತ್ಸವ ಇರಲಿದೆ. ಹೀಗಾಗಿ ಸೆ.18ರಂದು ವಿಶ್ವ ಕರ್ಮ ಜಯಂಗಿ ಆಚರಿಸಲಾಗುವುದು. ಅಂದು ಬೆಳಗ್ಗೆ 9 ಗಂಟೆಗೆ ಕೊಪ್ಪಳದ ಸಿರಸಪ್ಪಯ್ಯನ ಮಠ ಆವರಣದಿಂದ ಸಾಹಿತ್ಯ ಭವನವರೆಗೆ ವಿಶ್ವಕರ್ಮ ಅವರ ಭಾವಚಿತ್ರ ಮೆರವಣಿಗೆ ನಡೆಯಲಿದೆ. ಬೆಳಗ್ಗೆ 10 ಗಂಟೆಗೆ ಸಾಹಿತ್ಯ ಭವನದಲ್ಲಿ ವೇದಿಕೆ ಕಾರ್ಯಕ್ರಮ ಇರಲಿದೆ. ಮೆರವಣಿಗೆ ಸಾಗುವ ಮಾರ್ಗ ಸ್ವಚ್ಛಪಡಿಸಿ. ಕುಡಿವ ನೀರು ವ್ಯವಸ್ಥೆ ಕಲ್ಪಿಸಿ. ವೇದಿಕೆ ಅಲಂಕಾರ, ಗಣ್ಯರಿಗೆ ಪುಸ್ತಕ ವಿತರಣೆ, ಬಂದೋಬಸ್ತ್​ ವ್ಯವಸ್ಥೆ ಮಾಡಿ. ಎಲ್ಲ ಅಧಿಕಾರಿಗಳು ನಿಮಗೆ ವಹಿಸಿದ ಜವಾಬ್ದಾರಿ ಸರಿಯಾಗಿ ನಿಭಾಯಿಸಿ. ಸಮುದಾಯ ಬಂಧುಗಳ ಸಹಕಾರವೂ ಅಗತ್ಯವಿದ್ದು, ಜಿಲ್ಲಾಡಳಿತದೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ತಿಪ್ಪಣ್ಣ ಸಿರಸಗಿ, ಕನ್ನಡ ಮತ್ತು ಸಂಸತಿ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರೇಶ ಮರಬನಳ್ಳಿ, ಸಮುದಾಯ ಮುಖಂಡರಾದ ನಾಗೇಶ ಕುಮಾರ್​, ದೇವಪ್ಪ ಬಡಿಗೇರ್​, ಎ.ಪ್ರಕಾಶ, ರುದ್ರಪ್ಪ ಬಡಿಗೇರ್​, ಬ್ರಹ್ಮನಾಂದ ಬಡಿಗೇರ್​, ಮೌನೇಶ್​ ಬಡಿಗೇರ್​ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net