

ಮಂಡ್ಯ: ಜಿಲ್ಲಾಡಳಿತ ವತಿಯಿಂದ ಏಪ್ರಿಲ್ ಮಾಹೆಯಲ್ಲಿ ವಿವಿಧ ಜಯಂತಿಗಳನ್ನು ಯಾವುದೇ ಲೋಪದೋಷವಿಲ್ಲದೆ ಅರ್ಥಪೂರ್ಣವಾಗಿ ಆಚರಿಸೋಣ ಎಂದು ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ದೇವರದಾಸಿಮಯ್ಯ ಜಯಂತಿಯನ್ನು ಏ.2ರಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣ ಹಾಗೂ ಭಗವಾನ್ ಮಹಾವೀರ ಜಯಂತಿಯನ್ನು ಏ.10ರಂದು ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರದಲ್ಲಿ ಆಚರಿಸಲು ಸಮುದಾಯ ಮುಖಂಡರೊಂದಿಗೆ ಚರ್ಚಿಸಿ ನಿರ್ಧರಿಸಲಾಯಿತು.
ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ವಿ.ನಂದೀಶ್, ಜಿಲ್ಲಾ ಆಯುಷ್ ವೈದ್ಯಾಧಿಕಾರಿ ಡಾ.ಪುಷ್ಪಾ, ಜಿಲ್ಲಾ ಕುಷ್ಠರೋಗ ನಿರ್ಮೂಲನ ಅಧಿಕಾರಿ ಡಾ.ಸೋಮಶೇಖರ್ ಇತರರಿದ್ದರು.