

ಚಿತ್ರದುರ್ಗ: ಆಶ್ರಯ ಬಡಾವಣೆಯಲ್ಲಿ ವಾಂತಿ-ಭೇದಿ ಪ್ರಕರಣ ವರದಿಯಾದ ಬೆನ್ನಲ್ಲೇ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ತಾತ್ಕಾಲಿಕ ಚಿಕಿತ್ಸಾಲಯದಲ್ಲಿ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚಿಸಿದ ಅವರು, ವಿವಿಧ ಮನೆಗಳಿಗೆ ತೆರಳಿ ಶುದ್ಧ ಕುಡಿಯುವ ನೀರು ಮತ್ತು ಆಹಾರ ಸೇವಿಸಿ. ಸುತ್ತಮುತ್ತಲಿನ ಪರಿಸರ ಸ್ವಚ್ಛವಾಗಿ ಇಟ್ಟುಕೊಳ್ಳಿ ಎಂದು ಮನವಿ ಮಾಡಿದರು. ನಗರಸಭೆ ಪೌರಾಯುಕ್ತ ಶ್ರೀನಿವಾಸ್, ವೈದ್ಯರು ಇತರರಿದ್ದರು.