

ಮೈಸೂರು: ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಅವರು ಶನಿವಾರ ಮೈಸೂರು ತಾಲೂಕಿನ ವಿವಿಧ ಸರ್ಕಾರಿ ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
ಸರ್ಕಾರಿ ಆಸ್ಪತ್ರೆಗಳ ಸುಧಾರಣೆಗಾಗಿ ಹಾಗೂ ರೋಗಿಗಳಿಗೆ ಸರ್ಕಾರಿ ಸೇವೆಗಳು ಸಮರ್ಪಕವಾಗಿ ತಲುಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ನೀಡಿದ ನಿರ್ದೇಶನದ ಮೇರೆಗೆ ಪರಿಶೀಲಿಸಲಾಯಿತು. ಪರಿಶೀಲನೆ ಸಮಯದಲ್ಲಿ ಹಾಜರಿದ್ದ ರೋಗಿಗಳು ಮತ್ತು ಅವರ ಕುಟುಂಬದವರ ಚರ್ಚೆ ನಡೆಸಿದರಲ್ಲದೇ, ಸರ್ಕಾರಿ ಸವಲತ್ತುಗಳನ್ನು ಸಾರ್ವಜನಿಕರಿಗೆ ಸಮರ್ಪಕವಾಗಿ ತಲುಪಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.
ರೋಗಿಗಳಿಗೆ ಉತ್ತಮವಾದ ವೈದ್ಯಕೀಯ ಸೇವೆ ಮತ್ತು ಉಪಚಾರ ಮತ್ತು ಔಷಧೋಪಚಾರಗಳನ್ನು ಸಮರ್ಪಕವಾಗಿ ದೊರೆಯುವಂತೆ ಮಾಡಬೇಕು. ಯಾವುದೇ ರೋಗಿಗಳಿಗೂ ಚಿಕಿತ್ಸೆ ವಿಳಂಬವಾಗದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.
ತಾಲೂಕು ಆರೋಗ್ಯಾಧಿಕಾರಿ ಡಾ. ಪುಟ್ಟತಾಯಮ್ಮ, ಆಸ್ಪತ್ರೆಯ ವೈದ್ಯರು ಇದ್ದರು.