ವ್ಯಸನಮುಕ್ತ ದಿನಾಚರಣೆ: ಪ್ರತಿಜ್ಞಾವಿಧಿ ಸ್ವೀಕಾರ

DC Office Program (1)
Published on

ಹೊಸಪೇಟೆ: ಡಾ.ಮಹಾಂತ ಶಿವಯೋಗಿ ಸ್ವಾಮಿಗಳು ಕೇವಲ ಅನುಭಾವಿಕ ವಿಚಾರಗಳನ್ನು ಬೋಧಿಸದೇ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕಾಗಿ ಪಣತೊಟ್ಟಿದ್ದರು ಎಂದು ಅಪರ ಜಿಲ್ಲಾಧಿಕಾರಿ ಅನುರಾಧ ಜಿ. ತಿಳಿಸಿದರು.
ಜಿಲ್ಲಾಡಳಿತ, ಜಿ.ಪಂ., ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ಮಂಗಳವಾರ ಹುನಗುಂದ ತಾಲೂಕು ಇಳಕಲ್‌ನ ವಿಜಯ ಮಹಾಂತೇಶ ಪೀಠದ ಡಾ.ಮಹಾಂತ ಸ್ವಾಮೀಜಿ ಜನ್ಮದಿನದ ನಿಮಿತ್ತ ಆಯೋಜಿಸಿದ್ದ ವ್ಯಸನ ಮುಕ್ತ ದಿನಾಚರಣೆಯಲ್ಲಿ ಶ್ರೀಗಳ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಅವರು ಮಾತನಾಡಿದರು.
ಸ್ವಾಮಿಗಳು ಜೋಳಿಗೆ ಹಿಡಿದು ಮನೆ ಮನೆಗೆ ತೆರಳಿ ಹದಿಹರೆಯದವರು ಸೇರಿದಂತೆ ಪ್ರತಿಯೊಬ್ಬರೂ ದುಶ್ಚಟಗಳಿಗೆ ದಾಸರಾದವರಿಂದ
ಮಾದಕ, ಮದ್ಯದ ಬಾಟಲಿಗಳನ್ನು ತಮ್ಮ ಜೋಳಿಗೆಗೆ ಹಾಕಿಸಿಕೊಳ್ಳುವ ಮೂಲಕ ದುಶ್ಚಟಗಳಿಂದ ಮುಕ್ತರನ್ನಾಗಿಸಿದ್ದರು. ಅವರು ಹಾಕಿಕೊಟ್ಟ ಹಾದಿಯಲ್ಲಿ ಪ್ರತಿಯೊಬ್ಬರೂ ನಡೆಯಬೇಕು. ಪೂಜ್ಯರ ಆಶಯದಂತೆ ವ್ಯಸನ ಮುಕ್ತ ಹಾಗೂ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಸಲಹೆ ನೀಡಿದರು.
ನಂತರ ಜಿಲ್ಲಾಧಿಕಾರಿಗಳ ಕಚೇರಿ ಸಿಬ್ಬಂದಿ ಹಾಗೂ ವಿವಿಧ ಇಲಾಖೆಯ ಸಿಬ್ಬಂದಿಗೆ ಮದ್ಯಪಾನ, ಮಾದಕ ವಸ್ತು ಮತ್ತು ತಂಬಾಕು ವಸ್ತುಗಳ ವ್ಯಸನಮುಕ್ತಗೊಳಿಸುವ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.
ಸಾರ್ವಜನಿಕ ಆಸ್ಪತ್ರೆಯ ಮನೋವೈದ್ಯಾಧಿಕಾರಿ ಡಾ.ಸುಹಾಸ್ ಅವರು ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳು ಹಾಗೂ ಚಿಕಿತ್ಸಾ ವಿಧಾನ ಕುರಿತು ವಿಶೇಷ ಉಪನ್ಯಾಸ ನೀಡಿದರು.
ತಹಸೀಲ್ದಾರ್ ಪ್ರತಿಭಾ, ಮೇಘ ಸೇರಿದಂತೆ ಜಿಲ್ಲಾಧಿಕಾರಿಗಳ ಕಚೇರಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಿಬ್ಬಂದಿ, ವಿವಿಧ ಸಮುದಾಯದ ಮುಖಂಡರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net