ವ್ಯಸನಮುಕ್ತ ದಿನಾಚರಣೆ ನಾಳೆ

WhatsApp Image 2024-07-30 at 7.36.38 PM
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ಶ್ರೀ ಮಹಾಂತ ಶಿವಯೋಗಿಗಳ ಜನ್ಮದಿನ ನಿಮಿತ್ತ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಶ್ರಯದಲ್ಲಿ ವ್ಯಸನಮುಕ್ತ ದಿನ ಹಾಗೂ ವಿಚಾರ ಸಂಕಿರಣವನ್ನು ಆ. 1ರಂದು ಬೆಳಗ್ಗೆ 10.30ಕ್ಕೆ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ ಸಭಾಭವನದಲ್ಲಿ ಆಯೋಜಿಸಲಾಗಿದೆ.
ಮನಗುಂಡಿ ಗ್ರಾಮದ ಗುರುಬಸವ ಮಹಾಮನೆಯ ಶ್ರೀ ಬಸವಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ ಕಾರ್ಯಕ್ರಮ ಉದ್ಘಾಟಿಸುವರು. ಅತಿಥಿಗಳಾಗಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಸಭಾಪತಿ ಬಸವರಾಜ ಹೊರಟ್ಟಿ, ವಿಧಾನ ಪರಿಷತ್​ ಮುಖ್ಯ ಸಚೇತಕ ಸಲೀಂ ಅಹ್ಮದ, ಶಾಸಕರಾದ ವಿನಯ ಕುಲಕರ್ಣಿ, ಅಬ್ಬಯ್ಯ ಪ್ರಸಾದ, ಭರಮಗೌಡ ಅಲಗೌಡ ಕಾಗೆ, ಜೆ.ಎನ್​.ಗಣೇಶ, ಎನ್​.ಎಚ್​ ಕೋನರಡ್ಡಿ, ಮಹೇಶ ಟೆಂಗಿನಕಾಯಿ, ಎಂ.ಆರ್​.ಪಾಟೀಲ್​, ಎಸ್​.ವಿ.ಸಂಕನೂರ, ಪ್ರದಿಪ ಶೆಟ್ಟರ, ಜಿಲ್ಲಾಧಿಕಾರಿ ದಿವ್ಯ ಪ್ರಭು, ನಿಗಮ ಮಂಡಳಿ ಅಧ್ಯಕ್ಷರು, ಹಿರಿಯ ಅಧಿಕಾರಿಗಳು, ಇತರರು ಆಗಮಿಸುವರು. ಶಾಸಕ ಅರವಿಂದ ಬೆಲ್ಲದ ಅಧ್ಯಕ್ಷತೆ ವಹಿಸಲಿದ್ದಾರೆ.
ಮಾನಸಿಕ ಆರೋಗ್ಯ ಮತ್ತು ವ್ಯಸನ ಮುಕ್ತತೆಯ ಉಪಾಯಗಳು ಕುರಿತು ಡಿಮ್ಹಾನ್ಸ್​ ಟಿಲಿಮಾನಸ್​ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಸುಧೀಂದ್ರ ಹುದ್ದಾರ ಉಪನ್ಯಾಸ ನೀಡುವರು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net