

ಚನ್ನಗಿರಿ: ವ್ಯಸನಮುಕ್ತ ಸಮಾಜಕ್ಕಾಗಿ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಬೇಕು ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಂಪನ್ಮೂಲ ವ್ಯಕ್ತಿ ಎಂ.ಯು. ಚನ್ನಬಸಪ್ಪ ತಿಳಿಸಿದರು.
ಇಲ್ಲಿನ ಸರ್ಕಾರಿ ಬಾಲಿಕಾ ಪ್ರೌಢಶಾಲೆಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಕರ್ನಾಟಕ ಜನಜಾಗೃತಿ ವೇದಿಕೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಸ್ವಾಸ್ಥೃ ಸಂಕಲ್ಪ ಕಾರ್ಯಕ್ರಮ ಉದ್ಘಾಟಿಸಿ ಗುರುವಾರ ಮಾತನಾಡಿದರು.
ಸುಂದರ ಜೀವನ ಕಟ್ಟಿಕೊಳ್ಳುವಂತಹ ವಯಸ್ಸಿನಲ್ಲಿ ಯುವಕ-ಯುವತಿಯರು ಸಿನಿಮಾ, ಟಿವಿಗಳ ಪ್ಯಾಷನ್‌ಗಳಿಗೆ ಮಾರು ಹೋಗಿ ದುಶ್ಚಟಗಳಿಗೆ ಬಲಿಯಾಗುತ್ತಿದ್ದಾರೆ.
ಕುಟುಂಬಗಳಿಗೆ ಹೊರೆಯಾಗುತ್ತಿದ್ದಾರೆ. ಇತ್ತೀಚೆಗೆ ವಿಶ್ವ ಅರೋಗ್ಯ ಸಂಸ್ಥೆ ನಡೆಸಿದ ಸಮೀಕ್ಷೆಯಲ್ಲಿ 18ರಿಂದ 24 ವರ್ಷ ವಯೋಮಾನದವರು ಹೆಚ್ಚಿನ ವ್ಯಸನಕ್ಕೆ ತುತ್ತಾಗುತ್ತಿರುವ ವರದಿ ಇದೆ ಎಂದರು.
ಮದ್ಯ ಸೇವನೆ ನಮ್ಮ ಆರೋಗ್ಯವನ್ನು ಹದಗೆಡಿಸುತ್ತದೆ. ಆದ್ದರಿಂದ ಸರ್ಕಾರಗಳು ಬಾರ್ ಮತ್ತು ರೆಸ್ಟೋರೆಂಟ್, ತಂಬಾಕು ಉತ್ಪನ್ನ ಮಾರಾಟ ನಿಷೇಧ ಮಾಡಬೇಕು ಎಂದು ಒತ್ತಾಯಿಸಿದರು.
ಮಹಿಳಾ ರಕ್ಷಣಾ ವೇದಿಕೆ ಅಧ್ಯಕ್ಷೆ ಜ್ಯೋತಿ ಕೋರಿ, ಬಾಲಿಕಾ ಪ್ರೌಢಶಾಲೆ ಮುಖ್ಯಶಿಕ್ಷಕ ಬಸವರಾಜ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾಧಿಕಾರಿ ದಿನೇಶ್, ಮೇಲ್ವಿಚಾರಕಿ ಶಾರದಾ, ಜನಜಾಗೃತಿ ವೇದಿಕೆ ಸದಸ್ಯ ಜಗದೀಶ್ ಇದ್ದರು.