ಕೆರೆಗೆ ಚರಂಡಿ ನೀರು ಸೇರ್ಪಡೆ ಅಭಿವೃದ್ಧಿಗೆ ಅಡ್ಡಗಾಲು

14 Dwd 4 Prof. P.LPatil
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ಕೃಷಿ ವಿಶ್ವವಿದ್ಯಾಲಯ ಅಧೀನದ ಇಲ್ಲಿನ ಕೆಲಗೇರಿ ಕೆರೆಗೆ ಚರಂಡಿ ನೀರು ಸೇರುತ್ತಿದೆ. ಸಾರ್ವಜನಿಕರು ಕಸ ಎಸೆಯುತ್ತಿದ್ದಾರೆ. ಇದೆಲ್ಲ ನಿಲ್ಲುವವರೆಗೆ ಕೆರೆಯ ಸುಧಾರಣೆ ಸಾಧ್ಯವಿಲ್ಲ ಎಂದು ಕೃಷಿ ವಿಶ್ವವಿದ್ಯಾಲಯ ಕುಲಪತಿ ಪ್ರೊ. ಪಿ.ಎಲ್. ಪಾಟೀಲ ಹೇಳಿದರು.
ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆರೆಯ ನಿರ್ವಹಣೆಗೆ ವಿಶ್ವವಿದ್ಯಾಲಯ ಸಿದ್ಧ ಇದೆ. ಆದರೆ, ಸುತ್ತಲಿನ ನಿವಾಸಿಗಳು ಸುಧಾರಿಸುವವರೆಗೆ ಕೆರೆ ಸುಧಾರಣೆ ಸಾಧ್ಯವಿಲ್ಲ. ಜನರಲ್ಲಿ ಸಾಮಾಜಿಕ ಪ್ರಜ್ಞೆ ಇಲ್ಲ. ಕೆರೆಗೆ ಚರಂಡಿ ನೀರು ಸೇರುವುದನ್ನು ತಡೆಯಲು ಮಹಾನಗರ ಪಾಲಿಕೆ ಆಯುಕ್ತರಿಗೆ ವಿನಂತಿಸಲಾಗಿದೆ. ಆದರೆ, ಪಾಲಿಕೆಯಿಂದ ಸ್ಪಂದನೆ ಸಿಗುತ್ತಿಲ್ಲ. ಕೆರೆಯ ನಿರ್ವಹಣೆಯನ್ನು ಮಾಡುತ್ತೇವೆ ಎಂದರೆ ಬಿಟ್ಟು ಕೊಡಲಾಗುವುದು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net