ಜಿಲ್ಲೆಯಿಂದ ಹೆಚ್ಚುವರಿ ಬಸ್ ಕಾರ್ಯಾಚರಣೆ

Published on

ಬಳ್ಳಾರಿ : ಕಲಬುರಗಿಯಲ್ಲಿ ಕಲ್ಯಾಣ ಕರ್ನಾಟಕ ಉದ್ಯೋಗ ಮೇಳ ಏ.16 ರಂದು ಆಯೋಜಿಸಿದ್ದು, ಈ ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳುವ ಉದ್ಯೋಗಾಕಾಂಕ್ಷಿಗಳ ಅನುಕೂಲಕ್ಕಾಗಿ ಜಿಲ್ಲೆಯಿಂದ ಏ.15 ರಂದು ಜನದಟ್ಟಣೆಯ ಮೇರೆಗೆ ಕಕರಸಾನಿ ಬಳ್ಳಾರಿ ವಿಭಾಗದಿಂದ ಹೆಚ್ಚುವರಿ ಸಾರಿಗೆ ಸೌಕರ್ಯ ಒದಗಿಸಲಾಗುತ್ತಿದೆ. ಉದ್ಯೋಗಾಕಾಂಕ್ಷಿಗಳು ಹಾಗೂ ಪ್ರಯಾಣಿಕರು ಇದರ ಸದುಪಯೋಗಪಡಿಸಿಕೊಳ್ಳಬೇಕು ಎಂದು ಜಿಲ್ಲಾ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಇನಾಯತ್ ಬಾಗ್ ಬಾನ್ ಪ್ರಕಟಣೆಯಲ್ಲಿ ಕೋರಿದ್ದಾರೆ.

=======

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net