ಮನೋಹರ ಕುಮಾರ್ ಗೆ ಹೆಚ್ಚುವರಿ ಹೊಣೆ

Bel_Manohar
Published on

ಬೆಳ್ತಂಗಡಿ: ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರಾಗಿ ನಿಯುಕ್ತರಾಗಿದ್ದ ಮನೋಹರ ಕುಮಾರ್ ಎ. ಅವರನ್ನು ಬೆಳ್ತಂಗಡಿ ಪ್ರಧಾನ ಸಿವಿಲ್ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯ ಮತ್ತು ಹೆಚ್ಚುವರಿ ಸಿವಿಲ್ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯದಲ್ಲಿ ದಾಖಲಾಗುವ ಪ್ರಕರಣಗಳ ಹೆಚ್ಚುವರಿ ಹೊಣೆ ವಹಿಸಿಕೊಳ್ಳುವಂತೆ ಸರ್ಕಾರ ಆದೇಶಿಸಿದೆ.

ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್ ಸೂಚನೆ ಮೇರೆಗೆ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆಯ (ಆಡಳಿತ 2) ಅಧೀನ ಕಾರ್ಯದರ್ಶಿ ಆದಿನಾರಾಯಣ ಅವರು ಈ ಆದೇಶ ನೀಡಿದ್ದಾರೆ. ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಶಿಫಾರಸ್ಸಿನ ಮೇರೆಗೆ ಈ ಹೆಚ್ಚುವರಿ ಹೊಣೆ ವಹಿಸುವಂತೆ ವಿಧಾನ ಸಭಾಧ್ಯಕ್ಷರು ಸೂಚನೆ ನೀಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net