ಎ.ಈ.ರಘುಗೆ ಹೆಚ್ಚುವರಿ ಜವಾಬ್ದಾರಿ

Published on

ಹನೂರು : ತಾಲೂಕಿನ ಮಲೆಮಹದೇಶ್ವರ ಬೆಟ್ಟದ ಶ್ರೀ ಮಲೆಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎ.ಈ. ರಘು ಅವರನ್ನು ಈ ಹುದ್ದೆಯ ಜತೆಗೆ ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಪ್ರಭಾರ ಮುಖ್ಯ ಆಡಳಿತಾಧಿಕಾರಿಯಾಗಿ ನೇಮಕ ಮಾಡಿ ಶುಕ್ರವಾರ ಸರ್ಕಾರದ ಅಧೀನ ಕಾರ್ಯದರ್ಶಿ ಕೆ.ಎಚ್. ಕೇಶವಪ್ರಸಾದ್ ಆದೇಶ ಹೊರಡಿಸಿದ್ದಾರೆ.

ಎ.ಈ.ರಘು
ಎ.ಈ.ರಘು

ದಕ್ಚಿಣ ಕನ್ನಡ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿಯಾಗಿದ್ದ ಕೆಎಎಸ್ ಹಿರಿಯ ಶ್ರೇಣಿಯ ಎ.ಈ. ರಘು ಅವರನ್ನು ಸರ್ಕಾರ ಫೆ.11 ರಂದು ಶ್ರೀ ಮಲೆಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಯಾಗಿ ನೇಮಕ ಮಾಡಿತ್ತು. 7 ತಿಂಗಳ ಅವಧಿಯಲ್ಲಿ ಮ.ಬೆಟ್ಟದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿದ್ದರಲ್ಲದೇ ಜಾತ್ರಾ ಮಹೋತ್ಸವವನ್ನು ಯಶಸ್ವಿಯಾಗಿ ನಿಭಾಯಿಸಿದ್ದರು. ಇದೀಗ ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಧೋಧನಾ ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿ ಸ್ಥಾನಕ್ಕೆ ಪ್ರಭಾರದಲ್ಲಿರಿಸಿ ಸರ್ಕಾರ ಆದೇಶಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net