

ಸಿದ್ದಾಪುರ: ಪಟ್ಟಣ ಸಮೀಪದ ಅವರಗುಪ್ಪದಲ್ಲಿ ಕಳೆದ ಒಂದುವಾರದಿಂದ ಶ್ರದ್ಧಾ-ಭಕ್ತಿಯಿಂದ ಹಾಗೂ ವಿಜೃಂಭಣೆಯಿಂದ ಜರುಗುತ್ತಿರುವ ಶ್ರೀ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವ ಮಂಗಳವಾರ ಸಂಪನ್ನಗೊಳ್ಳಲಿದೆ.
ಪ್ರತಿ ಒಂಬತ್ತು ವರ್ಷಕ್ಕೊಮ್ಮೆ ಜರುಗುವ ಜಾತ್ರಾಮಹೋತ್ಸವಕ್ಕೆ ಜಿಲ್ಲೆಯ ವಿವಿಧ ತಾಲೂಕಿನ ಹಾಗೂ ಹೊರ ಜಿಲ್ಲೆಯ ಸಹಸ್ರಾರು ಭಕ್ತರು ಆಗಮಿಸಿ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿ ಸಕಲ ಇಷ್ಟಾರ್ಥಗಳನ್ನು ಈಡೇರಿಸುವಂತೆ ಬೇಡಿಕೊಂಡರು.
ಶಾಸಕ ಭೀಮಣ್ಣ ನಾಯ್ಕ ಕುಟುಂಬ ಸಮೇತವಾಗಿ ಆಗಮಿಸಿ ದೇವಿಯ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಭೇಟಿ ನೀಡಿ ದೇವಿಯ ದರ್ಶನ ಪಡೆದು ಪೂಜೆಸಲ್ಲಿಸಿದರು.