ಸಮರ್ಪಕ ಅನುಷ್ಠಾನಕ್ಕೆ ಸಮನ್ವಯ ಸಾಧಿಸಿ

2 KMP 04
ಕಂಪ್ಲಿಯಲ್ಲಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆಯಲ್ಲಿ ಸಮಿತಿ ಅಧ್ಯಕ್ಷ ಕೆ.ಶ್ರೀನಿವಾಸರಾವ್ ಮಾತನಾಡಿದರು. ತಾಪಂ ಇಒ ಆರ್.ಕೆ.ಶ್ರೀಕುಮಾರ್, ಎಡಿ ಕೆ.ಎಸ್.ಮಲ್ಲನಗೌಡ ಇದ್ದರು.
Published on

ಕಂಪ್ಲಿ: ಪಟ್ಟಣದ ತಾಪಂ ಸಭಾಂಗಣದಲ್ಲಿ ತಾಲೂಕು ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಮಂಗಳವಾರ ನಡೆಯಿತು.

ಯೋಜನೆಯ ತಾಲೂಕು ಅಧ್ಯಕ್ಷ ಕೆ.ಶ್ರೀನಿವಾಸರಾವ್ ಮಾತನಾಡಿ, ಅರ್ಹ ಫಲಾನುಭವಿಗಳಿಗೆ ಗ್ಯಾರಂಟಿ ಯೋಜನೆಗಳನ್ನು ತಲುಪಿಸುವಲ್ಲಿ ಅಧಿಕಾರಿಗಳು ಸಮನ್ವಯ ಸಾಧಿಸಬೇಕು. ಯೋಜನೆಗಳಿಂದ ವಂಚಿತರಾದ ಅರ್ಹ ಫಲಾನುಭವಿಗಳಿಗೆ ಯೋಜನೆಗಳನ್ನು ತಲುಪಿಸುವಂತೆ ತಿಳಿಸಿದರು.

ಗೃಹಜ್ಯೋತಿ ಯೋಜನೆಯಡಿ 1,444 ಜನ ನೋಂದಣಿ ಮಾಡಿಕೊಳ್ಳಬೇಕಿದ್ದು, ಗ್ರಾಪಂವಾರು ಪಟ್ಟಿ ಕೊಡುವಂತೆ ಅಧ್ಯಕ್ಷರು ಸೂಚಿಸಿದರು. ಈ ಕುರಿತು ಪ್ರತಿಕ್ರಿಯಿಸಿದ ತಾಪಂ ಇಒ ಆರ್.ಕೆ.ಶ್ರೀಕುಮಾರ್ ಸ್ಥಳ ಗುರುತಿಸಿ ಆರ್.ಆರ್ ನಂಬರ್ ಮಾಹಿತಿ ನೀಡುವಂತೆ ಪಿಡಿಒಗಳಿಗೆ ಸೂಚಿಸಿದರು.

ಯುವನಿಧಿಗಾಗಿ 790 ಜನರು ಹೆಸರು ನೋಂದಾಯಿಸಿದ್ದು, ಈ ಪೈಕಿ 733 ಪದವೀಧರರು, 57 ಜನ ಡಿಪ್ಲೊಮಾ ಪಡೆದವರಿದ್ದಾರೆ. ಫಲಾನುಭವಿಗಳಿಗೆ ಈತನಕ 1.46 ಕೋಟಿ ರೂ. ವೆಚ್ಚ ಮಾಡಲಾಗಿದೆ. 2023ರ ಜೂ.11ರಿಂದ ಈತನಕ ಕುರುಗೋಡು ಘಟಕದಿಂದ ಶಕ್ತಿ ಯೋಜನೆಯಡಿ 51,52,712 ಪ್ರಯಾಣಿಕರು ಪ್ರಯಾಣಿಸಿದ್ದು, 21.77 ಕೋಟಿ ರೂ. ಆದಾಯ ಗಳಿಸಿದ ಬಗ್ಗೆ ಮಾಹಿತಿ ನೀಡಲಾಯಿತು. ಅಂಗನವಾಡಿಯಲ್ಲಿ ಮಕ್ಕಳ ಹಾಜರಾತಿ ಸಂಖ್ಯೆ ಕಡಿಮೆ ಆಗುತ್ತಿರುವ ಬಗ್ಗೆ ಚರ್ಚಿಸಲಾಯಿತು.

ನರೇಗಾ ಎಡಿ ಕೆ.ಎಸ್.ಮಲ್ಲನಗೌಡ, ಸಮಿತಿ ಸದಸ್ಯರಾದ ಶಿವಕುಮಾರ್, ಸಿ.ವಿಜಯಲಕ್ಷ್ಮೀ, ಶಿವರಾಜಕುಮಾರ್, ವಿ.ರಮೇಶ, ಮಂಜುನಾಥ, ವೀರಭದ್ರಗೌಡ, ರೇಣುಕಮ್ಮ, ಕರಿಯಪ್ಪ, ಎಂ.ವೀರೇಶ, ಎಂ.ರಾಜಾಭಕ್ಷಿ, ಲಕ್ಷ್ಮೀಕಾಂತ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net