ಜಿಲ್ಲಾದ್ಯಂತ ಸೂಕ್ತ ಬಂದೋಬಸ್ತ್

SP Dharmendrakumar Meena
Published on

ಚಿತ್ರದುರ್ಗ: ವಿವಿಧ ಸಂಘಟನೆಗಳು ಶುಕ್ರವಾರ ಕರೆ ನೀಡಿರುವ ಕರ್ನಾಟಕ ಬಂದ್ ಸಂದರ್ಭದಲ್ಲಿ ಬಲವಂತದಿಂದ ಶಾಲಾ, ಕಾಲೇಜು, ಅಂಗಡಿ, ಮುಂಗಟ್ಟುಗಳನ್ನು ಮುಚ್ಚಿಸುವಂತಿಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರ ಕುಮಾರ್‌ಮೀನಾ ಸೂಚಿಸಿದ್ದಾರೆ.

ಸಾರಿಗೆ ಸೇರಿ ಯಾವುದೇ ರೀತಿಯ ವಾಹನಗಳ ಸಂಚಾರಕ್ಕೆ ಅಡ್ಡಿಪಡಿಸುವಂತಿಲ್ಲ, ಎಂದಿನ ಜನ ಜೀವನಕ್ಕೆ ಯಾರಾದರೂ ಅಡ್ಡಿ ಪಡಿಸಿದರೆ ಅಂಥವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು. ಜಿಲ್ಲಾದ್ಯಂತೆ ಅಹಿತಕರ ಘಟನೆಗಳಾಗದಂತೆ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net