ಮಂಗಳೂರಿನಲ್ಲಿ ಎಡಿಜಿಪಿ ಅಲೋಕ್ ಕುಮಾರ್ ಸಭೆ

IMG-20220525-WA0028
Published on

ಮಂಗಳೂರು: ಮಳಲಿ ಮಸೀದಿ ವಿಚಾರದಲ್ಲಿ ವಿವಾದ ಹೊತ್ತಿಕೊಂಡಿರುವ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಮಂಗಳೂರಿಗೆ ಆಗಮಿಸಿದ್ದಾರೆ. ಮಂಗಳೂರಿನಲ್ಲಿ ಕಮಿಷನರೇಟ್ ವ್ಯಾಪ್ತಿಯ ಪೊಲೀಸ್ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ್ದಾರೆ.ಕಮಿಷನರ್ ಕಚೇರಿಯಲ್ಲಿ ಸಭೆ ನಡೆಸಿದ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅಲೋಕ್ ಕುಮಾರ್, ಎಡಿಜಿಪಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಪ್ರಥಮ ಬಾರಿಗೆ ಮಂಗಳೂರಿಗೆ ಆಗಮಿಸಿದ್ದೇನೆ. ಮಳಲಿ ಮಸೀದಿ ವಿಚಾರದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರಲು ಆಸ್ಪದ ನೀಡುವುದಿಲ್ಲ ಎಂದು ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net