ರಾಜ್ಯ ಮಟ್ಟದ ಚುಂಚಶ್ರೀ ಕ್ರೀಡಾಕೂಟ, ಜಡಿ ಮಳೆಯಲ್ಲಿ ಕ್ರೀಡಾ ಉತ್ಸವ

IMG_20241213_191438.jpg
Published on

ಚಿಕ್ಕಬಳ್ಳಾಪುರ: ಇಲ್ಲಿನ ಎಸ್ ಜೆಸಿ ತಾಂತ್ರಿಕ ಮಹಾ ವಿದ್ಯಾಲಯದ ಬಿಜಿಎಸ್ ಕ್ರೀಡಾಂಗಣದಲ್ಲಿ 27ನೇ ರಾಜ್ಯಮಟ್ಟದ ಚುಂಚಾದ್ರಿ ಕ್ರೀಡೋತ್ಸವಕ್ಕೆ ಚಾಲನೆ ನೀಡಲಾಯಿತು. ‌
ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಆಯೋಜಿಸಲಾಗಿದ್ದ  ಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮದ ಸಾನಿಧ್ಯ ವಹಿಸಿ ಮಾತನಾಡಿದ  ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ  ನಿರ್ಮಲಾನಂದನಾಥ  ಮಹಾಸ್ವಾಮೀಜಿ, ಪ್ರತಿಭೆಯನ್ನು ಪ್ರದರ್ಶಿಸುವ ಅವಕಾಶಗಳಿಂದ ವಿದ್ಯಾರ್ಥಿಗಳು ವಂಚಿತರಾಗಬಾರದು‌. ಸಕಾಲಕ್ಕೆ ಸಮರ್ಪಕವಾಗಿ ಬಳಸಿಕೊಂಡು ಉತ್ತಮ ಸಾಧನೆ ತೋರಬೇಕು ಎಂದು ಸಲಹೆ ನೀಡಿದರು. ‌ ಕಾರ್ಯಕ್ರಮದಲ್ಲಿ  ಸುಪ್ರೀಂಕೋರ್ಟ್ ನ ವಿಶ್ರಾಂತ ನ್ಯಾಯಮೂರ್ತಿ ಗೋಪಾಲ್ ಗೌಡ, ಅಂತಾರಾಷ್ಟ್ರೀಯ ಕ್ರೀಡಾಪಟು ಉಷಾರಾಣಿ, ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ, ಕನ್ನಡ ಖಾಸಗಿ ವಾಹಿನಿಯ ಎಂ.ಡಿ ಎಸ್ ರವಿಕುಮಾರ್, ವಕೀಲ ಅಮರ್ ನಾಥ್ ಗೌಡ ಮತ್ತಿತರರು ಇದ್ದರು.‌

*ವಿವಿಧ ಸ್ಪರ್ಧೆಗಳಲ್ಲಿ ಭಾಗಿ*
ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಹವಾಮಾನ ವೈಪರೀತ್ಯದ ಜಡಿ ಮಳೆಯ ನಡುವೆಯೂ ಉತ್ಸಾಹದಿಂದ ಕ್ರೀಡೆಗಳಲ್ಲಿ ಭಾಗವಹಿಸಿದ್ದರು‌. ಸ್ಪರ್ಧೆಯ ವಿಭಾಗಗಳಲ್ಲಿ ಪರಸ್ಪರ ಪೈಪೋಟಿ ನೀಡಿದರು. ಇದೇ ವೇಳೆ ತರಬೇತುದಾರರು ಮಾರ್ಗದರ್ಶನ ನೀಡಿ ಪ್ರೋತ್ಸಾಹಿಸಿದರು. ಸಾಂಸ್ಕೃತಿಕ ಕಲಾ ತಂಡಗಳ ಮೆರವಣಿಗೆ, ವಿವಿಧ ವೇಷಾವಳಿಯಲ್ಲಿ ವಿದ್ಯಾರ್ಥಿಗಳು ಲವಲವಿಕೆಯು ಕ್ರೀಡಾಕೂಟಕ್ಕೆ ಮೆರಗು ನೀಡಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net