ಸಚಿವ ಸಂತೋಷ ಲಾಡ್ ಅಭಿಪ್ರಾಯ; ಆದಿಕವಿ ಮಹರ್ಷಿ ವಾಲ್ಮೀಕಿ ಭಾರತದ ಮಹಾನ್ ಜ್ಞಾನಿ

28 Dwd 1
Published on

ಧಾರವಾಡ: ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿಯವರು ಬರೆದ ರಾಮಾಯಣ ಇಡೀ ಹಿಂದು ರಾಷ್ಟಕ್ಕೆ ನೀಡಿದ ಅತ್ಯಮೂಲ್ಯ ಕೊಡುಗೆಯಾಗಿದೆ. ಈ ಮಹಾನ್ ಜ್ಞಾನಿಯನ್ನು ಸಮಾಜ ಸದಾಕಾಲ ಸ್ಮರಿಸಬೇಕು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದರು.
ನಗರದ ಡಾ. ಪಾಟೀಲ ಪುಟ್ಟಪ್ಪ ಸಭಾಭವನದಲ್ಲಿ ಜಿಲ್ಲಾಡಳಿತದಿಂದ ಶನಿವಾರ ಆಯೋಜಿಸಿದ್ದ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ವಾಲ್ಮೀಕಿ ಮಹರ್ಷಿಗಳ ಜಯಂತಿ ಎಂದರೆ ರಾಮಾಯಾಣ ಮಹಾಕಾವ್ಯದ ಸ್ಮರಣೆ. 24,000 ಶ್ಲೋಕಗಳ ರಾಮಾಯಾಣವು ಇಡೀ ಹಿಂದು ರಾಷ್ಟಕ್ಕೆ ಸಂಪತ್ತು. ಈ ಮಹಾಕಾವ್ಯ ಬರೆದ ವಾಲ್ಮೀಕಿಯನ್ನು ಬ್ರಿಟೀಷರು ಮಹಾನ್ ಜ್ಞಾನಿ ಎಂದು ಕರೆದಿದ್ದಾರೆ. ಅವರು ವಾಲ್ಮೀಕಿ ಸಮಾಜಕ್ಕೆ ಮಾತ್ರವಲ್ಲದೆ, ದೇಶಕ್ಕೆ ಮಹಾಗುರು ಆಗಿದ್ದಾರೆ. ಮಹನೀಯರ ಆದರ್ಶಗಳನ್ನು ಇಂದಿನ ಯುವಪೀಳಿಗೆ ಪಾಲಿಸಬೇಕಾದ ಅಗತ್ಯವಿದೆ ಎಂದರು.
ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರು ಹಾಗೂ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ವಾಲ್ಮೀಕಿ ಅಭಿವೃದ್ಧಿ ಮಂಡಳಿಯಿ0ದ ಫಲಾನುಭವಿಗಳಿಗೆ ಸಹಾಯಧನದ ಚೆಕ್ ವಿತರಿಸಲಾಯಿತು.
ರಾಜ್ಯ ಸಂಪನ್ಮೂಲ ಶಿಕ್ಷಕ ಹಾಗೂ ಮನಗುಂಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ರಂಗನಾಥ ವಾಲ್ಮೀಕಿ ಅವರು ಉಪನ್ಯಾಸ ನೀಡಿದರು.
ಜಿಲ್ಲಾಽಕಾರಿ ಗುರುದತ್ತ ಹೆಗಡೆ, ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ್, ಪೊಲೀಸ್ ವರಿಷ್ಠಾಽಕಾರಿ ಡಾ. ಗೋಪಾಲ ಬ್ಯಾಕೋಡ, ಜಿ.ಪಂ. ಉಪ ಕಾರ್ಯದರ್ಶಿ ಬಿ.ಎಸ್. ಮುಗನೂರಮಠ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಅಲ್ಲಾಬಕಾಷ್ ಎಂ.ಎಸ್, ಸಮಾಜದ ಮುಖಂಡರಾದ ಡಾ. ಲೋಹಿತ ನಾಯ್ಕರ, ಮೋಹನ ಗುಡಸಲಮನಿ, ಶಾಂತಾ ಗುಜ್ಜಳ, ಸುರೇಶಬಾಬು ತಳವಾರ, ಬಕ್ಕಾಯಿ, ಡಾ. ಕಲ್ಮೇಶ ಹಾವೇರಿಪೇಟ, ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net