9/11 ಸಮಸ್ಯೆ ಪ್ರಸ್ತಾವಿಸಿದ ಮಂಜುನಾಥ್ ಭಂಡಾರಿ - ವಿಜಯವಾಣಿ ವರದಿ ಉಲ್ಲೇಖ

Published on


ಪುತ್ತೂರು: ಗ್ರಾಮ ಪಂಚಾಯಿತಿ ಮಟ್ಟದಲ್ಲಿ ನಡೆಸಲಾಗುತ್ತಿದ್ದ ೯/೧೧ ವ್ಯವಸ್ಥೆಯನ್ನು ಜಿಲ್ಲಾ ಕೇಂದ್ರಕ್ಕೆ ವರ್ಗಾಯಿಸಿ ಜನರಿಗೆ ಸಮಸ್ಯೆಯಾಗುತ್ತಿರುವ ಬಗ್ಗೆ ವಿಧಾನ ಮಂಡಲ ಅಽವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಶೂನ್ಯ ವೇಳೆಯಲ್ಲಿ ಪ್ರಸ್ತಾಪಿಸಿದರು.

ರಾಜೀವ್ ಗಾಂಽ ಪಂಚಾಯತ್‌ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ಕುಳಾಲ್ ಸುಭಾಶ್ಚಂದ್ರ ಶೆಟ್ಟಿ ಅವರು ಉಸ್ತುವಾರಿ ಸಚಿವ ದಿನೇಶ್ ಗುಂಡುರಾವ್ ಅವರಿಗೆ ನೀಡಿದ ಮನವಿಯ ಬಗ್ಗೆ ವಿಜಯವಾಣಿ ಪತ್ರಿಕಾ ವರದಿಯನ್ನು ಉಲ್ಲೇಖಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗ್ರಾಪಂ ಮೂಲಕ ನಮೂನೆ ೯/೧೧ ಪಡೆಯಲು ಜನಸಾಮಾನ್ಯರಿಗೆ ತೀವ್ರ ತೊಂದರೆಯಾಗುತ್ತಿದ್ದು, ಗ್ರಾಮೀಣ ಭಾಗದಿಂದ ದೂರದ ಮುಡಾ ಕಚೇರಿಗೆ ಅಲೆಯ ಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿಂದೆ ಗ್ರಾಪಂಗೆ ನೀಡಿದ ಲೇಔಟ್ ಅನುಮೋದನೆ ಅಽಕಾರವನ್ನು ಪುನರ್ ಸ್ಥಾಪಿಸಬೇಕೆಂದು ಸರ್ಕಾರವನ್ನು ಶೂನ್ಯ ವೇಳೆಯಲ್ಲಿ ಆಗ್ರಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net