ಆದಿ ಭೈರವಲಿಂಗೇಶ್ವರ ರಥೋತ್ಸವ ಅದ್ದೂರಿ

DVD 1
Published on

ದೇವದುರ್ಗ: ಪಟ್ಟಣದ ಚಂದನಗಿರಿಯ ಆದಿ ಭೈರವಲಿಂಗೇಶ್ವರ ರಥೋತ್ಸವ ಸೋಮವಾರ ಅದ್ದೂರಿಯಾಗಿ ಜರುಗಿತು.
ಬೆಳಗ್ಗೆ ಆದಿಭೈರವಲಿಂಗೇಶ್ವರ ಮೂರ್ತಿಗೆ ರುದ್ರಾಭಿಷೇಕ, ಬಿಲ್ವಾರ್ಚನೆ ಪೂಜೆ ನಡೆದವು. ಭಕ್ತರು ವಿಶೇಷ ದರ್ಶನ ಪಡೆದು ಪೂಜೆ ಸಲ್ಲಿಸಿದರು. ನಂತರ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು. ಸಂಜೆ ರಥೋತ್ಸವ ಅದ್ದೂರಿಯಾಗಿ ಜರುಗಿತು. ಕಪಿಲ ಸಿದ್ದರಾಮೇಶ್ವರ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಪಟ್ಟಣ ಹಾಗೂ ಸುತ್ತಮುತ್ತಲಿನ ತಾಂಡಾ, ದೊಡ್ಡಿ ಭಕ್ತರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net