

ಮಂಡ್ಯ: ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ತಾಲೂಕಿನ ಮುರಾರ್ಜಿ ದೇಸಾಯಿ ವಸತಿ ಶಾಲೆ, ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆ, ಇಂದಿರಾಗಾಂಧಿ ವಸತಿ ಶಾಲೆ, ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಗಳಲ್ಲಿ 7, 8 ಮತ್ತು 9ನೇ ತರಗತಿಗೆ ಜಾತಿವಾರು ಹಾಗೂ ಲಿಂಗವಾರು ಖಾಲಿ ಇರುವ ಸ್ಥಾನಗಳಿಗೆ ಅರ್ಹ ಅಭ್ಯರ್ಥಿಗಳ ದಾಖಲಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹರು ಜೂ.24ರ ಸಂಜೆ 4.30ರೊಳಗೆ ಸೂಕ್ತ ದಾಖಲಾತಿಗಳೊಂದಿಗೆ ತಾಲೂಕಿನ ಯಾವುದಾದರೊಂದು ವಸತಿ ಶಾಲೆಗೆ ಸಲ್ಲಿಸಲು ಪ್ರವೇಶ ಪತ್ರಗಳನ್ನು ಪಡೆದುಕೊಳ್ಳಬಹುದು. ದಾಖಲಾತಿಗೆ ವಿದ್ಯಾರ್ಥಿಗಳ ಆಯ್ಕೆ ಸಂಬಂಧ ಪ್ರವೇಶ ಪರೀಕ್ಷೆ ಜೂ. 28ರಂದು ಮಧ್ಯಾಹ್ನ 2 ರಿಂದ 4.30ರವರೆಗೆ ನಡೆಯಲಿದೆ. ಪ್ರವೇಶ ಪರೀಕ್ಷೆಯು ಸ್ಥಳ ಮತ್ತು ಸಮಯ, ಇತರೆ ಮಾಹಿತಿಯುವ ಪ್ರವೇಶ ಪತ್ರದಲ್ಲಿ ನಮೂದಾಗಿರುತ್ತದೆ. ಪ್ರವೇಶ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯಾ ವಸತಿ ಶಾಲೆಗಳ ವರ್ಗವಾರು ಮತ್ತು ಲಿಂಗವಾರು ಸ್ಥಾನಗಳಿಗೆ ದಾಖಲಾತಿ ಮಾಡಿಕೊಳ್ಳಲಾಗುವುದು. ಮಾಹಿತಿಗೆ ವಸತಿ ಶಾಲೆ ಪ್ರಾಂಶುಪಾಲರುಗಳನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.