

ತುಮಕೂರು: ಹಿಂದುಳಿದ ವರ್ಗರ್ಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಮೆಟ್ರಿಕ್ ನಂತರದ ಬಾಲಕ, ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾತಿ ಮತ್ತು ಪ.ವರ್ಗದ ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
ಆಸಕ್ತ ವಿದ್ಯಾರ್ಥಿಗಳು ಅರ್ಜಿಯನ್ನು ಅಕ್ಟೋಬರ್ 4ರೊಳಗಾಗಿ ಜಾಲತಾಣ ಮೂಲಕ ಸಲ್ಲಿಸಬಹುದಾಗಿದೆ. ತಾಲೂಕುವಾರು ವಿದ್ಯಾರ್ಥಿ ನಿಲಯಗಳ ವಿವರ, ವಿದ್ಯಾರ್ಥಿ ನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ, ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಜಾಲತಾಣ ಸಂಪರ್ಕಿಸಿ.