ಕರ್ನಾಟಕ ರಾಜ್ಯ ಮುಕ್ತ ವಿ.ವಿ. ಪ್ರವೇಶಾತಿ ಆರಂಭ

ಕುಲಪತಿ ಪ್ರೊ.ಎ.ಪಿ. ಜ್ಞಾನಪ್ರಕಾಶ್ , ವಿವಿ ಡೀನ್ ಆನಂದ ಗೌಡ, ಮಡಿಕೇರಿ ಪ್ರಾದೇಶಿಕ ಕೇಂದ್ರದ ನಿರ್ದೇಶಕಿ ಸ್ಮಿತಾ, ಮಂಗಳೂರು ಪ್ರಾದೇಶಿಕ ಕೇಂದ್ರದ ನಿರ್ದೇಶಕ ಮಂಜುನಾಥ್, ಜಗದೀಶ್ ಇದ್ದರು.
ಕುಲಪತಿ ಪ್ರೊ.ಎ.ಪಿ. ಜ್ಞಾನಪ್ರಕಾಶ್ , ವಿವಿ ಡೀನ್ ಆನಂದ ಗೌಡ, ಮಡಿಕೇರಿ ಪ್ರಾದೇಶಿಕ ಕೇಂದ್ರದ ನಿರ್ದೇಶಕಿ ಸ್ಮಿತಾ, ಮಂಗಳೂರು ಪ್ರಾದೇಶಿಕ ಕೇಂದ್ರದ ನಿರ್ದೇಶಕ ಮಂಜುನಾಥ್, ಜಗದೀಶ್ ಇದ್ದರು.
Published on
ಮಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2026-27ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಯ ಯುಜಿಸಿ ಅನುಮೋದಿತ 65 (ಓಡಿಎಲ್) ಕೋರ್ಸ್‌ಗಳ ಪ್ರವೇಶಾತಿ ಆರಂಭಗೊಂಡಿದೆ ಎಂದು ಕುಲಪತಿ ಪ್ರೊ.ಎ.ಪಿ. ಜ್ಞಾನಪ್ರಕಾಶ್ ತಿಳಿಸಿದರು.
ರಾಜ್ಯದಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಹೊರತುಪಡಿಸಿ ಬೇರಾವುದೇ ಸಾಂಪ್ರಾದಾಯಿಕ ವಿವಿಗಳು ದೂರ ಮತ್ತು ಮುಕ್ತ ಶಿಕ್ಷಣ ಕಾರ್ಯಕ್ರಮ ನಡೆಸುವಂತಿಲ್ಲ ಎಂಬ ಸರ್ಕಾರದ ಅಧಿಸೂಚನೆಯಿದೆ. 2026-27ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಯ ಪ್ರವೇಶಾತಿ ಜೂ.22ರಿಂದ ಆರಂಭವಾಗಿದ್ದು, ಸೆ.15ರ ತನಕ ಅವಕಾಶವಿದೆ. ಯುಜಿಸಿ ಅನುಮೋದಿತ ಸ್ನಾತಕ/ಸ್ನಾತಕೋತ್ತರ ಪದವಿ ಕೋರ್ಸ್‌ಗಳಾದ ಬಿ.ಎ., ಬಿಕಾಂ., ಬಿ.ಬಿ.ಎ., ಬಿ.ಸಿ.ಎ., ಬಿ.ಎಸ್.ಡಬ್ಲ್ಯು., ಬಿ.ಎಲ್.ಐ.ಎಸ್ಸಿ., ಬಿ.ಎಡ್. (ಸಿ.ಇ.ಟಿ. ಮುಖಾಂತರ) ಬಿ.ಎಸ್ಸಿ-ಜನರಲ್, ಬಿ.ಎಸ್ಸಿ-ಐಟಿ., ಎಂ.ಎ., ಎಂ.ಸಿ.ಜೆ., ಎಂ.ಕಾಂ., ಎಂ.ಎಲ್.ಐ.ಎಸ್ಸಿ., ಎಂ.ಸಿ.ಎ., ಎಂ.ಎಸ್.ಡಬ್ಲ್ಯೂ., ಎಂ.ಎಸ್ಸಿ., ಎಂ.ಬಿ.ಎ., ಪಿ.ಜಿ. ಸರ್ಟಿಫಿಕೇಟ್ ಪ್ರೋಗ್ರಾಮ್ಸ್, ಯು.ಜಿ.. ಡಿಪ್ಲೋಮಾ ಹಾಗೂ ಸರ್ಟಿಫಿಕೇಟ್ ಪ್ರೋಗ್ರಾಮ್ಸ್‌ಗಳಿಗೆ ಪ್ರವೇಶಾತಿ ಪ್ರಕ್ರಿಯೆಗಳು ಆರಂಭಗೊಂಡಿದೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಕರಾಮುವಿಯ ಮಂಗಳೂರಿನ ದತ್ತನಗರದ ಎದುರಿನಲ್ಲಿ ಮಂಗಳೂರು ಪ್ರಾದೇಶಿಕ ಕೇಂದ್ರ ಸೇರಿದಂತೆ ಎಲ್ಲ ಪ್ರಾದೆಶಿಕ ಕೇಂದ್ರಗಳಿಗೆ ಪ್ರವೇಶಾತಿ ಮಾಡಿಕೊಳ್ಳಲಾಗುತ್ತಿದೆ. ಕರಾಮುವಿಯ ಅಧಿಕೃತ ವೆಬ್‌ಸೈಟ್ ಡಿಡಿಡಿ.ಟ್ಠಞಠ್ಠ್ಟ್ಠ.ಚ್ಚ.ಜ್ಞಿ ನಲ್ಲಿ ಕೆಎಸ್‌ಒಯು ಅಡ್ಮೀಷನ್ ಪೋರ್ಟಲ್ ಮೂಲಕ ಪದವಿಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಭರ್ತಿ ಮಾಡಿ ನಂತರ ಪ್ರಾದೇಶಿಕ ಕೇಂದ್ರಕ್ಕೆ ಖುದ್ದಾಗಿ ಭೇಟಿ ನೀಡಿ ದಾಖಲಾತಿಗಳ ಪರಿಶೀಲನೆ ನಂತರ ಆನ್‌ಲೈನ್ ಮುಖಾಂತರ ಪ್ರವೇಶಾತಿ ಶುಲ್ಕ ಪಾವತಿಸಿ ಸಿದ್ದಪಾಠಗಳನ್ನು ಪಡೆಯಬಹುದು ಎಂದರು.
ಬಿ.ಎ. ಸಾಮಾನ್ಯ (ಇತಿಹಾಸ, ಅರ್ಥಶಾಸ್ತ್ರ, ರಾಜ್ಯಶಾಸ್ತ್ರ), ಬಿ.ಕಾಂ., ಎಂ.ಎ.-ಕನ್ನಡ, ಇಂಗ್ಲಿಷ್, ಹಿಂದಿ, ಸಂಸ್ಕೃತ, ಅರ್ಥಶಾಸ್ತ್ರ, ಎಂ.ಕಾಂ., ಎಂ.ಬಿ.ಎ., ಎಂ.ಎಸ್ಸಿ.-ಗಣಿತಶಾಸ್ತ್ರ. ಮೊದಲಾದ 10 ಸಂಪೂರ್ಣ ಆನ್‌ಲೈನ್ ಕೋರ್ಸ್‌ಗಳಾಗಿವೆ. ಅರ್ಹರಿಗೆ ಶುಲ್ಕ ವಿನಾಯಿತಿ, ವಿದ್ಯಾರ್ಥಿ ವೇತನ ವ್ಯವಸ್ಥೆ, ಭೋಧನಾ ಶುಲ್ಕದಲ್ಲಿ ರಿಯಾಯಿತಿ ಮೊದಲಾದ ಸೌಲಭ್ಯಗಳಿವೆ ಎಂದರು.
ರಾಜ್ಯದಲ್ಲಿ 70ಕ್ಕೂ ಅಧಿಕ ಪರೀಕ್ಷಾ ಕೇಂದ್ರ, ಪ್ರತಿ ತಾಲೂಕಿನಲ್ಲಿ ಕಲಿಕಾರ್ಥಿ ಸಹಾಯ ಕೇಂದ್ರಗಳಿವೆ. ಎಲ್ಲಾ ಶೈಕ್ಷಣಿಕ ಕ್ರಮಗಳ ಕಲಿಕಾ ಅಧ್ಯಯನ ಸಾಮಗ್ರಿ ಡಿಜಿಟಲೀಕರಣ, ಪ್ರತ್ಯೇಕ ಆ್ಯಪ್ ಮೂಲಕ ಕೋರ್ಸ್‌ಗೆ ಸಂಬಂಧಪಟ್ಟ ಸಂಪೂರ್ಣ ವಿವರ. ಯೂಟ್ಯೂಬ್ ಮೂಲಕವೂ ಮಾಹಿತಿ. ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರದ ಮೂಲಕ ಕನಿಷ್ಠ ಶುಲ್ಕದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 50 ದಿನಗಳು ವಸತಿಯೊಂದಿಗೆ ತರಬೇತಿ ನೀಡಲಾಗುತ್ತಿದೆ ಎಂದರು.
ವಿವಿ ಡೀನ್ ಆನಂದ ಗೌಡ, ಮಡಿಕೇರಿ ಪ್ರಾದೇಶಿಕ ಕೇಂದ್ರದ ನಿರ್ದೇಶಕಿ ಸ್ಮಿತಾ, ಮಂಗಳೂರು ಪ್ರಾದೇಶಿಕ ಕೇಂದ್ರದ ನಿರ್ದೇಶಕ ಮಂಜುನಾಥ್, ಜಗದೀಶ್ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net